AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಮಂಗಲದಲ್ಲಿ ಬಿಎಂಟಿಸಿ ಬಸ್ ಅಗ್ನಿ ಅವಘಡ; ತಪ್ಪಿದ ಅನಾಹುತ!

ಕೋರಮಂಗಲದಲ್ಲಿ ಬಿಎಂಟಿಸಿ ಬಸ್ ಅಗ್ನಿ ಅವಘಡ; ತಪ್ಪಿದ ಅನಾಹುತ!

ಶಿವಪ್ರಸಾದ್​ ಬಿ.
| Edited By: |

Updated on: Oct 31, 2026 | 12:44 PM

Share

ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡು ನಂತರ ಬೆಂಕಿ ಹೊತ್ತಿಕೊಂಡಿದೆ. ಸಮಯಪ್ರಜ್ಞೆ ಮೆರೆದ ಚಾಲಕ ಮತ್ತು ನಿರ್ವಾಹಕರು ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಾಂತ್ರಿಕ ದೋಷವೇ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

ಬೆಂಗಳೂರು, ಅಕ್ಟೋಬರ್ 31: ಬೆಂಗಳೂರಿನ ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ಬಿಎಂಟಿಸಿ ಬಸ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಲಿಸುತ್ತಿದ್ದ ಬಸ್‌ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ತಕ್ಷಣ ಚಾಲಕ ಮತ್ತು ನಿರ್ವಾಹಕರು ಸಮಯ ಪ್ರಜ್ಞೆ ಮೆರೆದು ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಬಸ್‌ನಿಂದ ಕೆಳಗಿಳಿಸಿದ್ದಾರೆ.

ಮೊದಲು ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಹೊಗೆಯು ಕೆಲವೇ ಕ್ಷಣಗಳಲ್ಲಿ ಬಸ್ ಅನ್ನು ಸಂಪೂರ್ಣವಾಗಿ ಆವರಿಸಿಕೊಂಡಿದೆ. ಈ ಘಟನೆ ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ನಡೆದಿದೆ. ಈ ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ತಾಂತ್ರಿಕ ದೋಷವೇ ಇದಕ್ಕೆ ಕಾರಣವಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More