ಕೋರಮಂಗಲದಲ್ಲಿ ಬಿಎಂಟಿಸಿ ಬಸ್ ಅಗ್ನಿ ಅವಘಡ; ತಪ್ಪಿದ ಅನಾಹುತ!
ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡು ನಂತರ ಬೆಂಕಿ ಹೊತ್ತಿಕೊಂಡಿದೆ. ಸಮಯಪ್ರಜ್ಞೆ ಮೆರೆದ ಚಾಲಕ ಮತ್ತು ನಿರ್ವಾಹಕರು ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಾಂತ್ರಿಕ ದೋಷವೇ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.
ಬೆಂಗಳೂರು, ಅಕ್ಟೋಬರ್ 31: ಬೆಂಗಳೂರಿನ ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ಬಿಎಂಟಿಸಿ ಬಸ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಲಿಸುತ್ತಿದ್ದ ಬಸ್‌ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ತಕ್ಷಣ ಚಾಲಕ ಮತ್ತು ನಿರ್ವಾಹಕರು ಸಮಯ ಪ್ರಜ್ಞೆ ಮೆರೆದು ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಬಸ್‌ನಿಂದ ಕೆಳಗಿಳಿಸಿದ್ದಾರೆ.
ಮೊದಲು ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಹೊಗೆಯು ಕೆಲವೇ ಕ್ಷಣಗಳಲ್ಲಿ ಬಸ್ ಅನ್ನು ಸಂಪೂರ್ಣವಾಗಿ ಆವರಿಸಿಕೊಂಡಿದೆ. ಈ ಘಟನೆ ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ನಡೆದಿದೆ. ಈ ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ತಾಂತ್ರಿಕ ದೋಷವೇ ಇದಕ್ಕೆ ಕಾರಣವಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
