ನಡುರಸ್ತೆಯಲ್ಲೇ ಹೊತ್ತಿ ಉರಿದ 30 ಜನ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​

Edited By: ವಿವೇಕ ಬಿರಾದಾರ

Updated on: Jul 09, 2024 | 10:38 AM

ಬೆಂಗಳೂರಿನ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್​ನಲ್ಲಿ ಬೆಳ್ಳಂಬೆಳಗ್ಗೆ ಬಿಎಂಟಿಸಿ ಬಸ್​ ಹೊತ್ತಿ ಉರಿದಿದೆ. ಬಸ್​ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು. ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರಿಗೆ ಯಾವುದೇ ಅನಾಹುತವಾಗಿಲ್ಲ.

ಬೆಂಗಳೂರು, ಜುಲೈ 09: ಬೆಳ್ಳಂಬೆಳಗ್ಗೆ ಬೆಂಗಳೂರು ಮಹಾನಗರ ಸಾರಿಗೆ (BMTC) ಹೊತ್ತಿ ಉರಿದಿದೆ. ನಗರದ ಎಂಜಿ ರಸ್ತೆಯಲ್ಲಿ ಘಟನೆ ನಡೆದಿದೆ. ಬಸ್​ನಲ್ಲಿ 30 ಜನ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಿಎಂಟಿಸಿ ಬಸ್​ ರೋಸ್​ ಗಾರ್ಡನ್​ನಿಂದ ಶಿವಾಜಿನಗರಕ್ಕೆ (Shivajinagar) ಬರುತ್ತಿತ್ತು. ಮಾರ್ಗ ಮಧ್ಯೆ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್​ನಲ್ಲಿ ಚಾಲಕ ಬಸ್ ಬಂದ್​ ಮಾಡಿದ್ದರು. ಮತ್ತೆ ಸ್ಟಾರ್ಟ್ ಆಗಿಲ್ಲ. 2-3 ಸಲ ಸ್ಟಾರ್ಟ್ ಮಾಡಲು ಯತ್ನಿಸಿದ್ದಾರೆ. ಆದರೆ, ಸ್ಟಾರ್ಟ್​ ಆಗಲಿಲ್ಲ. ಈ ವೇಳೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಬಸ್ ಸುಟ್ಟು ಭಸ್ಮವಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ಸಂಚಾರ ಬಂದ್​: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್ ​ಪೊಲೀಸ್​

Published on: Jul 09, 2024 10:19 AM
Loading...
Unable to load recommendations.
Follow Us
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನವರು. ಕಳೆದ 2 ವರ್ಷದಿಂದ ಟಿವಿ9 ಕನ್ನಡದ ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ ಅನುಭವವಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದಾರೆ.

Read More