ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಸಚಿವ ಯುಟಿ ಖಾದರ್ ಭರವಸೆ

Edited By:

Updated on: Nov 17, 2026 | 2:32 PM

ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧ ಹಾಗೂ ಐಟಿ-ಬಿಟಿ ಕಂಪನಿಗಳಲ್ಲಿ ಸ್ಮೋಕಿಂಗ್ ಝೋನ್ ನಿಯಮ ಪಾಲನೆ ಕುರಿತು ಮಾತನಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನಕ್ಕೆ ₹100 ದಂಡವಿದೆ. ಆರೋಗ್ಯ ಇಲಾಖೆ ಸಿಬ್ಬಂದಿಯ ಸಮಯಪಾಲನೆಗೆ ಆ್ಯಪ್ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು, ನವೆಂಬರ್ 17: ಬಿಎಂಟಿಸಿ ಬಸ್‌ಗಳ ಮೇಲೆ ತಂಬಾಕು ಜಾಹೀರಾತು ನಿಷೇಧಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ತಂಬಾಕು ಉತ್ಪನ್ನಗಳ ಪ್ರಚಾರಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಅವರು ತಿಳಿಸಿದರು. ಜನಸಾಮಾನ್ಯರಿಂದಲೂ ಜಾಹೀರಾತು ಫಲಕಗಳ ಕುರಿತು ಆಕ್ರೋಶ ವ್ಯಕ್ತವಾಗಿತ್ತು. ಸೆಲೆಬ್ರಿಟಿಗಳ ಚಿತ್ರ ಬಳಕೆ ಈಗ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ. ಐಟಿ-ಬಿಟಿ ಕಂಪನಿಗಳಲ್ಲಿನ ಸ್ಮೋಕಿಂಗ್ ಝೋನ್ ವಿಚಾರಕ್ಕೆ ಸಂಬಂಧಿಸಿದಂತೆ, ಧೂಮಪಾನಿಗಳಿಂದ ಇತರರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಸ್ಮೋಕಿಂಗ್ ಝೋನ್‌ಗಳಲ್ಲಿ ನಿಯಮ ಪಾಲನೆಗೆ ಒತ್ತು ನೀಡುವುದು ಅಗತ್ಯ. ಸಂಪೂರ್ಣ ನಿಷೇಧದಿಂದ ಶೇ 100ರಷ್ಟು ನಿಯಂತ್ರಣ ಸಾಧ್ಯವಿಲ್ಲದಿದ್ದರೂ, ಮಾರಾಟಕ್ಕೆ ಕಡಿವಾಣ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ಪ್ಯಾಸಿವ್ ಸ್ಮೋಕಿಂಗ್‌ನಿಂದಾಗುವ ಪರಿಣಾಮಗಳನ್ನು ಕಡಿಮೆ ಮಾಡಲು ಸ್ಮೋಕಿಂಗ್ ಝೋನ್‌ಗಳು ಸಹಾಯಕ. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನಕ್ಕೆ ಈಗಿರುವ 100 ರೂ. ದಂಡದ ಪ್ರಮಾಣ ಹೆಚ್ಚಳಕ್ಕೆ ಸದ್ಯಕ್ಕೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇದಲ್ಲದೆ, ಆರೋಗ್ಯ ಇಲಾಖೆ ಸಿಬ್ಬಂದಿಯ ಸಮಯ ಪಾಲನೆಗೆ ಆ್ಯಪ್ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಯು.ಟಿ.ಖಾದರ್ ಎಚ್ಚರಿಕೆ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More