ಕುಡಿದ ಅಮಲಿನಲ್ಲಿ ಬಿಎಂಟಿಸಿ ಬಸ್ ಚಾಲನೆ: ಸರಣಿ ಅಪಘಾತಗಳಾಗುತ್ತಿದ್ದರೂ ಚಾಲಕರಿಗೆ ಬುದ್ಧಿ ಬರುತ್ತಿಲ್ಲವೇ?

Updated on: Mar 19, 2026 | 1:03 PM

ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ BMTC ಚಾಲಕನೊಬ್ಬ ಮದ್ಯಪಾನ ಮಾಡಿ ಬಸ್ ಚಲಾಯಿಸಿ ಪ್ರಯಾಣಿಕರ ಜೀವಕ್ಕೆ ಅಪಾಯ ತಂದೊಡ್ಡಿದ್ದಾನೆ. ಭೀತಿಗೊಂಡ ಮಹಿಳಾ ಪ್ರಯಾಣಿಕರೊಬ್ಬರು ಚಾಲಕನ ಅಸಭ್ಯ ವರ್ತನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಿ, ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಕ್ರಮಗಳ ಅಗತ್ಯವಿದೆ.

ಬೆಂಗಳೂರು, ಮಾ.19: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಬಿಎಂಟಿಸಿ ಚಾಲಕರ ಅಟ್ಟಹಾಸ ಮುಂದುವರಿದಿದೆ. ನಿನ್ನೆ ರಾತ್ರಿ ಸುಮಾರು 7:30ರ ಸುಮಾರಿಗೆ ಟಿನ್ ಫ್ಯಾಕ್ಟರಿ ಬಳಿ ಮದ್ಯದ ಅಮಲಿನಲ್ಲಿ ಬಸ್ ಚಲಾಯಿಸುತ್ತಿದ್ದ ಚಾಲಕನೊಬ್ಬ ಮಹಿಳಾ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ್ದಾನೆ. KA 57 F 3660 ನೋಂದಣಿ ಸಂಖ್ಯೆಯ ಬಿಎಂಟಿಸಿ ಬಸ್ ಚಾಲಕ ಪೂರ್ಣ ಪ್ರಮಾಣದಲ್ಲಿ ಮದ್ಯ ಸೇವಿಸಿ ಬಸ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸುತ್ತಿದ್ದುದನ್ನು ಕಂಡು ಪ್ರಯಾಣಿಕರು ಭೀತಿಗೊಳಗಾಗಿದ್ದರು. ಚಾಲಕನ ವರ್ತನೆಯಿಂದ ಗಾಬರಿಗೊಂಡ ಮಹಿಳೆಯೊಬ್ಬರು ಬಸ್ ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ. ಈ ವೇಳೆ ಬಸ್ ನಿಲ್ಲಿಸದ ಚಾಲಕ, ಮಹಿಳೆಯ ಜೊತೆ ಉದ್ಧಟತನದಿಂದ ವಾಗ್ವಾದಕ್ಕಿಳಿದಿದ್ದಾನೆ. ಚಾಲಕನ ಅಸಭ್ಯ ವರ್ತನೆ ಮತ್ತು ಆತ ಮದ್ಯ ಸೇವಿಸಿರುವುದನ್ನು ಖಚಿತಪಡಿಸಿಕೊಳ್ಳಲು ಮಹಿಳೆ ತನ್ನ ಮೊಬೈಲ್‌ನಲ್ಲಿ ವಿಡಿಯೋ ಸೆರೆಹಿಡಿದಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ವರದಿ: ನಟರಾಜ್ ಟಿವಿ9 ಕನ್ನಡ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: Mar 19, 2026 01:02 PM
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More