ಹೆಬ್ಬಾಳ ಫ್ಲೈಓವರ್ ಮೇಲೆ ಸರಣಿ ಅಪಘಾತ; ಬಿಎಂಟಿಸಿ ಬಸ್ ಚಾಲಕನ ಯಡವಟ್ಟಿನಿಂದ ಘೋರ ದುರಂತ, ವಿಡಿಯೋ ನೋಡಿ
ಏರ್ಪೋರ್ಟ್ನಿಂದ ಹೆಚ್ಎಸ್ಆರ್ ಲೇಔಟ್ ಕಡೆ ಸಾಗುತ್ತಿದ್ದ KA57F-1794 ನಂಬರ್ನ ಬಿಎಂಟಿಸಿ ವೋಲ್ವೋ ಬಸ್ನಿಂದ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ನಾಲ್ಕು ಬೈಕ್ಗಳು ಹಾಗೂ 4 ಕಾರಿಗೆ ವೋಲ್ವೋ ಬಸ್ ಡಿಕ್ಕಿ ಹೊಡೆದಿದೆ. ಒಬ್ಬ ವಾಹನ ಸವಾರನ ಕಾಲಿಗೆ ತೀವ್ರವಾಗಿ ಗಾಯವಾಗಿದೆ. ಅಪಘಾತ ದೃಶ್ಯ ಬಸ್ನ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬೆಂಗಳೂರು, ಆಗಸ್ಟ್.13: ಹೆಬ್ಬಾಳದ ಎಸ್.ಟಿ ಮಾಲ್ ಬಳಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ಏರ್ಪೋರ್ಟ್ ನಿಂದ ಎಚ್ಎಸ್ಆರ್ ಲೇಔಟ್ ಕಡೆ ಸಂಚಾರ ಮಾಡ್ತಿದ್ದ ಬಿಎಂಟಿಸಿ ವೋಲ್ವೋ ಬಸ್ (BMTC Volvo Bus) ಚಾಲಕನ ನಿಯಂತ್ರಣ ತಪ್ಪಿದ್ದು ಬೈಕ್ ಹಾಗೂ ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸರಣಿ ಅಪಘಾತಗಳು ಸಂಭವಿಸಿದ್ದು ಒಬ್ಬ ವಾಹನ ಸವಾರನ ಕಾಲಿಗೆ ತೀವ್ರವಾಗಿ ಗಾಯವಾಗಿದೆ. ಅಪಘಾತ ದೃಶ್ಯ ಬಸ್ನ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ನಿನ್ನೆ ಬೆಳಗ್ಗೆ 9.25 ಗಂಟೆ ಸುಮಾರಿಗೆ ಹೆಬ್ಬಾಳ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಏರ್ಪೋರ್ಟ್ನಿಂದ ಹೆಚ್ಎಸ್ಆರ್ ಲೇಔಟ್ ಕಡೆ ಸಾಗುತ್ತಿದ್ದ KA57F-1794 ನಂಬರ್ನ ಬಿಎಂಟಿಸಿ ವೋಲ್ವೋ ಬಸ್ನಿಂದ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ನಾಲ್ಕು ಬೈಕ್ಗಳು ಹಾಗೂ 4 ಕಾರಿಗೆ ವೋಲ್ವೋ ಬಸ್ ಡಿಕ್ಕಿ ಹೊಡೆದಿದೆ. ಚೂರು ಹೆಚ್ಚು ಕಮ್ಮಿ ಆಗಿದ್ರೆ ಹತ್ತಾರು ವಾಹನ ಸವಾರರ ಪ್ರಾಣ ಹೋಗುತ್ತಿತ್ತು. ಅಪಘಾತದ ವಿಡಿಯೋ ಬೆಚ್ಚಿಬೀಳಿಸುವಂತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

