ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿ; ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತ

| Updated By: preethi shettigar

Updated on: Nov 19, 2021 | 2:49 PM

18,469 ಕ್ಯೂಸೆಕ್ ಹೊರ ಹರವಿನ ಪ್ರಮಾಣವಿದ್ದು, ಮಳೆ ಮುಂದುವರಿದರೆ ಹೊರಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಪ್ರವಾಸಿಗರಿಗೆ ಪಕ್ಷಿ ವೀಕ್ಷಣೆಗಷ್ಟೇ ಅವಕಾಶ ನೀಡಲು ನಿರ್ಧರಿಸಲಾಗಿದೆ.

ಮಂಡ್ಯ: ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆ ಡ್ಯಾಂನಿಂದ ಹೊರ ಹರಿವು‌ ನೀರಿನ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತ ಮಾಡಲಾಗಿದೆ. ಸದ್ಯ 18,469 ಕ್ಯೂಸೆಕ್ ಹೊರ ಹರವಿನ ಪ್ರಮಾಣವಿದ್ದು, ಮಳೆ ಮುಂದುವರಿದರೆ ಹೊರಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಪ್ರವಾಸಿಗರಿಗೆ ಪಕ್ಷಿ ವೀಕ್ಷಣೆಗಷ್ಟೇ ಅವಕಾಶ ನೀಡಲು ನಿರ್ಧರಿಸಲಾಗಿದೆ. ಇನ್ನು ಜಲಾಶಯದಿಂದ ನೀರಿನ ಹೊರ ಹರಿವು ಪ್ರಮಾಣ ಹೆಚ್ಚಳವಾದ ಹಿನ್ನೆಲೆ ನಿಮಿಷಾಂಬ ದೇಗುಲದ ಬಳಿ ಭಕ್ತರ ನದಿ ಸ್ನಾನಕ್ಕೆ ನಿರ್ಬಂಧ ಹೇರಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಂ ಬಳಿ ಕಾವೇರಿ ನದಿ ದಡದಲ್ಲಿರುವ ದೇವಾಲಯ ನಿಮಿಷಾಂಬ ದೇಗುಲದ ಸ್ನಾನಘಟ್ಟಕ್ಕೆ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಅಲ್ಲದೇ ನದಿ ದಡದತ್ತ ತೆರಳದಂತೆ ತಾಲೂಕು ಆಡಳಿತ ಸೂಚನೆ ನೀಡಿದೆ.

ಇದನ್ನೂ ಓದಿ:
Karnataka Dam Water Level: ಕಬಿನಿ, ಕೆಆರ್​ಎಸ್​, ಭದ್ರಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rains: ಭಾರಿ ಮಳೆಗೆ ತತ್ತರಿಸಿದ ಜನತೆ; ದಾವಣಗೆರೆ, ಚಿತ್ರದುರ್ಗದಲ್ಲಿ ಅಪಾರ ಪ್ರಮಾಣದ ಹಾನಿ