KSRTC ಬಸ್ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ
ವೇಗವಾಗಿ ಬಂದ ಬೊಲೆರೋ ಪಿಕ್-ಅಪ್ ಎದುರಿಗೆ ತೆರಳುತ್ತಿದ್ದ KSRTC ಬಸ್ಗೆ ಹಿಂದಿನಿಂದ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎರಡು ದಿನಗಳ ಹಿಂದೆ ಅಪಘಾತ ನಡೆದಿದ್ದು, ಬೊಲೆರೋ ಪಿಕ್-ಅಪ್ ಚಾಲಕ ಪವಾಡಸದೃಶ ಎಂಬಂತೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನೆಲಮಂಗಲ, ಜನವರಿ 16: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಪವಾಡ ಎಂಬಂತೆ ಬೊಲೆರೋ ಪಿಕ್-ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಬೈಕ್ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ

