Sanjay Dutt: ‘ಕೆಡಿ’ ಶೂಟಿಂಗ್ ಸೆಟ್ಗೆ ಕಾಲಿಟ್ಟ ಸಂಜಯ್ ದತ್; ಬಾಲಿವುಡ್ ನಟನ ಎಂಟ್ರಿಯಿಂದ ಹೆಚ್ಚಿತು ನಿರೀಕ್ಷೆ
KD Kannada Movie | Dhruva Sarja: ಪಾತ್ರವರ್ಗದ ಕಾರಣದಿಂದ ‘ಕೆಡಿ’ ಸಿನಿಮಾ ಹೈಪ್ ಸೃಷ್ಟಿ ಮಾಡಿದೆ. ಧ್ರುವ ಸರ್ಜಾ, ರವಿಚಂದ್ರನ್, ಸಂಜಯ್ ದತ್ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಧ್ರುವ ಸರ್ಜಾ ನಟನೆಯ ‘ಕೆಡಿ’ ಚಿತ್ರಕ್ಕೆ (KD Kannada Movie) ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈಗ ಈ ಚಿತ್ರದ ಶೂಟಿಂಗ್ ಸೆಟ್ಗೆ ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಎಂಟ್ರಿ ಕೊಟ್ಟಿದ್ದಾರೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಅವರು ಮತ್ತೆ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ‘ಕೆಡಿ’ ಸಿನಿಮಾದ ಶೂಟಿಂಗ್ ಸಲುವಾಗಿ ಸಂಜಯ್ ದತ್ ಅವರು ಬೆಂಗಳೂರಿಗೆ ಬಂದಿದ್ದಾರೆ. ಅವರಿಗೆ ಚಿತ್ರತಂಡ ಸ್ವಾಗತ ನೀಡಿದೆ. ರವಿಚಂದ್ರನ್ ಕೂಡ ಈ ಸಿನಿಮಾದಲ್ಲಿ ಒಂದು ಗಮನಾರ್ಹ ಪಾತ್ರ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಮೂಲಕ ‘ಕೆಡಿ’ ಚಿತ್ರ ನಿರ್ಮಾಣ ಆಗುತ್ತಿದೆ. ‘ಜೋಗಿ’ ಪ್ರೇಮ್ (Jogi Prem) ಅವರು ನಿರ್ದೇಶನ ಮಾಡುತ್ತಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು

16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ

ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
