Sanjay Dutt: ‘ಕೆಡಿ’ ಶೂಟಿಂಗ್​ ಸೆಟ್​ಗೆ ಕಾಲಿಟ್ಟ ಸಂಜಯ್​ ದತ್​; ಬಾಲಿವುಡ್​ ನಟನ ಎಂಟ್ರಿಯಿಂದ ಹೆಚ್ಚಿತು ನಿರೀಕ್ಷೆ

Updated on: Jan 30, 2023 | 11:02 PM

KD Kannada Movie | Dhruva Sarja: ಪಾತ್ರವರ್ಗದ ಕಾರಣದಿಂದ ‘ಕೆಡಿ’ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಧ್ರುವ ಸರ್ಜಾ, ರವಿಚಂದ್ರನ್​, ಸಂಜಯ್​ ದತ್​ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಧ್ರುವ ಸರ್ಜಾ ನಟನೆಯ ‘ಕೆಡಿ’ ಚಿತ್ರಕ್ಕೆ (KD Kannada Movie) ಶೂಟಿಂಗ್​ ನಡೆಯುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈಗ ಈ ಚಿತ್ರದ ಶೂಟಿಂಗ್​ ಸೆಟ್​ಗೆ ಬಾಲಿವುಡ್​ ನಟ ಸಂಜಯ್​ ದತ್​ (Sanjay Dutt) ಎಂಟ್ರಿ ಕೊಟ್ಟಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಅವರು ಮತ್ತೆ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ‘ಕೆಡಿ’ ಸಿನಿಮಾದ ಶೂಟಿಂಗ್​ ಸಲುವಾಗಿ ಸಂಜಯ್​ ದತ್​ ಅವರು ಬೆಂಗಳೂರಿಗೆ ಬಂದಿದ್ದಾರೆ. ಅವರಿಗೆ ಚಿತ್ರತಂಡ ಸ್ವಾಗತ ನೀಡಿದೆ. ರವಿಚಂದ್ರನ್​ ಕೂಡ ಈ ಸಿನಿಮಾದಲ್ಲಿ ಒಂದು ಗಮನಾರ್ಹ ಪಾತ್ರ ಮಾಡುತ್ತಿದ್ದಾರೆ. ಕೆವಿಎನ್​ ಪ್ರೊಡಕ್ಷನ್ಸ್​ ಮೂಲಕ ‘ಕೆಡಿ’ ಚಿತ್ರ ನಿರ್ಮಾಣ ಆಗುತ್ತಿದೆ. ‘ಜೋಗಿ’ ಪ್ರೇಮ್​ (Jogi Prem) ಅವರು ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More