Bharat Jodo Yatra: ರಾಹುಲ್ ಗಾಂಧಿ ಜೊತೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಾಲಿವುಡ್ ನಟಿ ಸ್ವರಾ ಭಾಸ್ಕರ್

Edited By:

Updated on: Dec 02, 2022 | 8:52 AM

ಭಾರತ್ ಜೋಡೋ ಯಾತ್ರೆ ಭಾರತವನ್ನು ಒಗ್ಗೂಡಿಸುವ ಗುರಿಯನ್ನು ಹೊಂದಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿರುವ ಈ ಯಾತ್ರೆಯು 84ನೇ ದಿನಕ್ಕೆ ಕಾಲಿಟ್ಟಿದ್ದು, ಮಧ್ಯಪ್ರದೇಶದ ಉಜ್ಜಯಿನಿ ಮೂಲಕ ಸಾಗಲಿದೆ.

ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ (Bharat Jodo Yatra) ಇದೀಗ ಮಧ್ಯಪ್ರದೇಶದಲ್ಲಿದೆ. ಈ ಪಾದಯಾತ್ರೆಯಲ್ಲಿ ಗುರುವಾರ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್, ಬಾಲಿವುಡ್ ನಟಿ ಸ್ವರಾ ಭಾಸ್ಕರ್ (Swara Bhaskar) ಕೂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದಾರೆ. ಭಾರತ್ ಜೋಡೋ ಯಾತ್ರೆ ಭಾರತವನ್ನು ಒಗ್ಗೂಡಿಸುವ ಗುರಿಯನ್ನು ಹೊಂದಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿರುವ ಈ ಯಾತ್ರೆಯು 84ನೇ ದಿನಕ್ಕೆ ಕಾಲಿಟ್ಟಿದ್ದು, ಮಧ್ಯಪ್ರದೇಶದ ಉಜ್ಜಯಿನಿ ಮೂಲಕ ಸಾಗಲಿದೆ. ಸೆಪ್ಟೆಂಬರ್ 7 ರಂದು ಆರಂಭಗೊಂಡ ಯಾತ್ರೆ ಇದುವರೆಗೆ 36 ಜಿಲ್ಲೆಗಳು, 7 ರಾಜ್ಯಗಳನ್ನು ಕ್ರಮಿಸಿದ್ದು, ಇನ್ನೂ 1,209 ಕಿ.ಮೀ ಸಾಗಬೇಕಿದೆ.