AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖನೌದಿಂದ ಕೆಐಎಬಿಗೆ ಬಂದಿದ್ದ ವಿಮಾನಕ್ಕೆ ಬಾಂಬ್​​ ಬೆದರಿಕೆ: ಫ್ಲೈಟ್​ನಲ್ಲಿದ್ದ ಪ್ರಯಾಣಿಕರಿಂದಲೇ ಕೃತ್ಯ ಶಂಕೆ

ಲಖನೌದಿಂದ ಕೆಐಎಬಿಗೆ ಬಂದಿದ್ದ ವಿಮಾನಕ್ಕೆ ಬಾಂಬ್​​ ಬೆದರಿಕೆ: ಫ್ಲೈಟ್​ನಲ್ಲಿದ್ದ ಪ್ರಯಾಣಿಕರಿಂದಲೇ ಕೃತ್ಯ ಶಂಕೆ

ನವೀನ್ ಕುಮಾರ್ ಟಿ.
| Edited By: |

Updated on: Aug 26, 2026 | 12:56 PM

Share

ಲಕ್ನೋದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ 6E-231 ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾದ್ದರಿಂದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭಾರಿ ಆತಂಕ ಸೃಷ್ಟಿಯಾಯಿತು. ಪೈಲಟ್ ಎಟಿಸಿಗೆ ಮಾಹಿತಿ ನೀಡಿದ ನಂತರ, ಪ್ರಯಾಣಿಕರನ್ನು ತಕ್ಷಣ ಕೆಳಗಿಳಿಸಿ, ಶ್ವಾನದಳ, ಸಿಐಎಸ್‌ಎಫ್ ಮತ್ತು ಪೊಲೀಸರಿಂದ ತೀವ್ರ ತಪಾಸಣೆ ನಡೆಸಲಾಯಿತು. ವಿಮಾನದ ಒಳಗೆ ಪತ್ರ ಸಿಕ್ಕಿದ ಕಾರಣ ಎಲ್ಲರಲ್ಲಿಯೂ ಗಲಿಬಿಲಿ ಉಂಟಾಗಿತ್ತು.

ದೇವನಹಳ್ಳಿ, ಆಗಸ್ಟ್​​ 26: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​ಪೋರ್ಟ್​​ನ ಟರ್ಮಿನಲ್-1ಕ್ಕೆ ಬಂದಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಲಖನೌದಿಂದ ಕೆಐಎಬಿಗೆ ಬಂದಿದ್ದ 6E-231 ಇಂಡಿಗೋ ವಿಮಾನ ಹಾರಾಟದಲ್ಲಿರುವಾಗಲೆ ಸಿಬ್ಬಂದಿಗೆ ಬೆದರಿಕೆ ಪತ್ರ ಸಿಕ್ಕಿದ್ದು, ಈ ಬಗ್ಗೆ ಎಟಿಸಿಗೆ ಪೈಲೆಟ್​​ ಮಾಹಿತಿ ನೀಡಿದ್ದರು. ಬೆದರಿಕೆ ಪತ್ರ ಹಿನ್ನೆಲೆ ರನ್ ವೇ ಪಕ್ಕದಲ್ಲಿ ಫ್ಲೈಟ್​ ನಿಲ್ಲಿಸಿ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿ ಶ್ವಾನದಳ, ಸಿಐಎಸ್ಎಫ್​ ಮತ್ತು ಪೊಲೀಸರಿಂದ ವಿಮಾನ ಪರಿಶೀಲನೆ ನಡೆಸಲಾಗಿದೆ. ಫ್ಲೈಟ್​ನಲ್ಲಿದ್ದ ಪ್ರಯಾಣಿಕರೆ ಬಾಂಬ್ ಬೆದರಿಕೆ ಪತ್ರ ಬರೆದಿಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More