ಮಾಷಾ ಅಲ್ಲಾ ಇಲ್ಲಿ ಬಾಂಬ್ ಹಾಕ್ತೇನೆ! ಬೆಳಗಾವಿ ಕಪಿಲೇಶ್ವರ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ
ಬೆಳಗಾವಿ ನಗರದಲ್ಲಿನ ಸುಪ್ರಸಿದ್ಧ ಕಪಿಲೇಶ್ವರ ದೇವಸ್ಥಾನದಲ್ಲಿ ಬಾಂಬ್ ಇಡುವುದಾಗಿ ಸಾಮಾಜಿಕ ಜಾಲಾತಾಣ ಇನ್ಸ್ಟಾಗ್ರಾಮ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಕೂಡಲೆ ಬೆಳಗಾವಿ ಸೈಬರ್ ಕ್ರೈಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿ, ಆಗಸ್ಟ್ 18: ಬೆಳಗಾವಿ (Belagavi) ನಗರದಲ್ಲಿನ ಸುಪ್ರಸಿದ್ಧ ಕಪಿಲೇಶ್ವರ ದೇವಸ್ಥಾನದಲ್ಲಿ (Kapileshwar Temple) ಬಾಂಬ್ (Bomb) ಹಾಕಲಾಗುತ್ತದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ. Marvelous belgaum ಎಂಬ ಹೆಸರಿನ ಇನ್ಸ್ಟಾಗ್ರಾಮ್ (Instagram) ಖಾತೆದಾರ ರಾಕೇಶ್ ನಂದಗಡಕರ ಅವರು ಆಗಸ್ಟ್ 12 ರಂದು ಕಪಿಲೇಶ್ವರ ದೇವಸ್ಥಾನದ ಪಲ್ಲಕ್ಕಿ ಉತ್ಸವದ ಸ್ಟೋರಿ ಹಾಕಿದ್ದರು. ಈ ಸ್ಟೋರಿ ನೋಡಿದ ಇಲಾಯಿತ್ ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆದಾರ ರಿಪ್ಲೈ ಮಾಡಿದ್ದು, “ಮಾಷಾ ಅಲ್ಲಾ ಇದರ್ ಬಾಂಬ್ ಪೋಡುಂಗಾ ಏಕ್ ದಿನ್ ಅಂತಾ ಮೆಸೇಜ್ ಹಾಕಿದ್ದಾನೆ.
ಬೆದರಿಕೆ ಸಂದೇಶವನ್ನು ಗಮನಿಸಿ marvelous belgaum ಖಾತೆದಾರ ರಾಕೇಶ್ ನಂದಗಡಕರ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಸದ್ಯ ಬೆಳಗಾವಿ ಸೈಬರ್ ಕ್ರೈಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos