ಮಾಷಾ ಅಲ್ಲಾ ಇಲ್ಲಿ ಬಾಂಬ್​ ಹಾಕ್ತೇನೆ! ಬೆಳಗಾವಿ ಕಪಿಲೇಶ್ವರ ದೇವಸ್ಥಾನಕ್ಕೆ ಬಾಂಬ್​ ಬೆದರಿಕೆ

Edited By: ವಿವೇಕ ಬಿರಾದಾರ

Updated on: Aug 18, 2024 | 12:46 PM

ಬೆಳಗಾವಿ ನಗರದಲ್ಲಿನ ಸುಪ್ರಸಿದ್ಧ ಕಪಿಲೇಶ್ವರ ದೇವಸ್ಥಾನದಲ್ಲಿ ಬಾಂಬ್​ ಇಡುವುದಾಗಿ ಸಾಮಾಜಿಕ ಜಾಲಾತಾಣ ಇನ್​ಸ್ಟಾಗ್ರಾಮ್​​ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಕೂಡಲೆ ಬೆಳಗಾವಿ ಸೈಬರ್ ಕ್ರೈಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಳಗಾವಿ, ಆಗಸ್ಟ್​​ 18: ಬೆಳಗಾವಿ (Belagavi) ನಗರದಲ್ಲಿನ ಸುಪ್ರಸಿದ್ಧ ಕಪಿಲೇಶ್ವರ ದೇವಸ್ಥಾನದಲ್ಲಿ (Kapileshwar Temple) ಬಾಂಬ್ (Bomb) ಹಾಕಲಾಗುತ್ತದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ. Marvelous belgaum ಎಂಬ ಹೆಸರಿನ ಇನ್​​ಸ್ಟಾಗ್ರಾಮ್ (Instagram) ​ಖಾತೆದಾರ ರಾಕೇಶ್ ನಂದಗಡಕರ ಅವರು ಆಗಸ್ಟ್ 12 ರಂದು ಕಪಿಲೇಶ್ವರ ದೇವಸ್ಥಾನದ ಪಲ್ಲಕ್ಕಿ ಉತ್ಸವದ ಸ್ಟೋರಿ ಹಾಕಿದ್ದರು. ಈ ಸ್ಟೋರಿ ನೋಡಿದ ಇಲಾಯಿತ್ ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆದಾರ ರಿಪ್ಲೈ ಮಾಡಿದ್ದು, “ಮಾಷಾ ಅಲ್ಲಾ ಇದರ್ ಬಾಂಬ್ ಪೋಡುಂಗಾ ಏಕ್ ದಿನ್ ಅಂತಾ ಮೆಸೇಜ್ ಹಾಕಿದ್ದಾನೆ.

ಬೆದರಿಕೆ ಸಂದೇಶವನ್ನು ಗಮನಿಸಿ marvelous belgaum ಖಾತೆದಾರ ರಾಕೇಶ್ ನಂದಗಡಕರ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಸದ್ಯ ಬೆಳಗಾವಿ ಸೈಬರ್ ಕ್ರೈಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More