ಸಿಎಂ ಡಿಕೆ ಶಿವಕುಮಾರ್ ಸದಾಶಿವನಗರದ ಮನೆ, ವಿಧಾನಸೌಧದಕ್ಕೆ ಬಾಂಬ್ ಬೆದರಿಕೆ: ಆರೋಪಿ ಬಂಧನ
ನಮ್ಮ ಯಾತ್ರಿ ಆ್ಯಪ್‌ನಲ್ಲಿ ಆಟೋ ಬುಕ್ ಮಾಡಿ, ಚಾಲಕನ ಬಳಿ ಪೊಲೀಸರಿಗೆ ಫೋನ್ ನೀಡುವಂತೆ ತಿಳಿಸಿದ ಕಿಡಿಗೇಡಿಯೊಬ್ಬ ಸಿಎಂ ಮನೆ ಮತ್ತು ವಿಧಾನಸೌಧದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಸದ್ಯ ಆಟೋ ಬುಕ್ಕಿಂಗ್ ಮಾಡಿದ್ದ ಕಾರ್ತಿಕ್ ಎಂಬಾತನನ್ನು ಬಂಧಿಸಲಾಗಿದ್ದು, ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು, ನವೆಂಬರ್ 27: ಸಿಎಂ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ಮನೆ, ವಿಧಾನಸೌಧದಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ನಮ್ಮ ಯಾತ್ರಿ ಆ್ಯಪ್‌ನಲ್ಲಿ ಆಟೋ ಬುಕ್ಕಿಂಗ್ ಮಾಡಿದ್ದ ಕಾರ್ತಿಕ್ ಎಂಬಾತ ಆಟೋ ಚಾಲಕನನ್ನು ಸಿಎಂ ಡಿಕೆಶಿ ನಿವಾಸದ ಮುಂದಿನ ಬ್ಯಾರಿಕೇಡ್ ಬಳಿ ಬರಲು ಹೇಳಿದ್ದ. ನಿಗದಿತ ಸ್ಥಳಕ್ಕೆ ಬಂದಿದ್ದ ಆಟೋ ಚಾಲಕ ಭಗವಂತರಾಯ, ಕಾರ್ತಿಕ್ಗೆ ಕರೆ ಮಾಡಿ ಸ್ಥಳಕ್ಕೆ ಬಂದಿರೋದಾಗಿ ತಿಳಿಸಿದ್ದಾರೆ. ಆಗ ಅಲ್ಲಿದ್ದ ಪೊಲೀಸರಿಗೆ ಫೋನ್ ಕೊಡು ಎಂದು ಕಾರ್ತಿಕ್ ಹೇಳಿದ್ದು, ಈ ವೇಳೆ ಸಿಎಂ ಮನೆ ಮತ್ತು ವಿಧಾನಸೌಧದಲ್ಲಿ ಬಾಂಬ್ ಇಟ್ಟಿದ್ದಾಗಿ ಆತ ಪೊಲೀಸರಿಗೆ ತಿಳಿಸಿದ್ದಾನೆ. ಸಿಎಂ ಬೆಂಗಾವಲು ಹೋಗುವಾಗ ಬ್ಲಾಸ್ಟ್ ಆಗುತ್ತೆ ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇನ್ನು ಘಟನೆ ಸಂಬಂಧ ಸದಾಶಿವನಗರ ಪೊಲೀಸರಿಂದ ಆರೋಪಿ ಕಾರ್ತಿಕ್ನನ್ನು ಬಂಧಿಸಲಾಗಿದೆ. ಮೇಲ್ನೋಟಕ್ಕೆ ಮಾನಸಿಕ ಅಸ್ವಸ್ಥನಂತೆ ಆರೋಪಿ ವರ್ತಿಸುತ್ತಿದ್ದು,
ಈ ಹಿಂದೆಯೂ ಹಲವು ಬೆದರಿಕೆ ಕರೆ ಮಾಡಿದ್ದ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
