ಬಾಂಬ್ ಇಟ್ಟವರು, ಯುವತಿಯನ್ನು ಸಾಯಿಸಿದವರು ಡಿಕೆ ಸಹೋದರರಿಗೆ ಎಮೋಶನಲ್ ಸಹೋದರರು: ಸಿಟಿ ರವಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 20, 2024 | 6:49 PM

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವರು, ಮಂಗಳೂರಲ್ಲಿ ಕುಕ್ಕರ್ ಬಾಂಬ್ ಸಿಡಿಸಿದವರು, ನೇಹಾಳನ್ನು ಕೊಂದವರು, ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಮನೆಗಳಿಗೆ ಬೆಂಕಿಯಿಟ್ಟವರೆಲ್ಲ ಕಾಂಗ್ರೆಸ್ ನಾಯಕರ ಭಾವನಾತ್ಮಕ ಸಹೋದರು ಎಂದು ರವಿ ಹೇಳಿದರು.

ಚಿಕ್ಕಮಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಹಿರಿಯ ಬಿಜೆಪಿ ನಾಯಕ ಸಿಟಿ ರವಿ (CT Ravi) ಕಾಂಗ್ರೆಸ್ ನಾಯಕರು ಅದರಲ್ಲೂ ವಿಶೇಷವಾಗಿ ಡಿಕೆ ಸಹೋದರರ (DK brothers) ವಿರುದ್ಧ ವಾಗ್ದಾಳಿ ನಡೆಸಿದರು. ಶಿವಕುಮಾರ್ (Shivakumar) ಅವರ ರಕ್ತ ಹಂಚಿಕೊಂಡು ಹುಟ್ಟಿರುವ ಸಹೋದರ ಸುರೇಶ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸೋಲುತ್ತಿದ್ದಾರೆ ಮತ್ತು ಅವರ ಎಮೋಶನಲ್ ಸಹೋದರರು ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದ್ದಾರೆ ಎಂದು ರವಿ ಹೇಳಿದರು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವರು, ಮಂಗಳೂರಲ್ಲಿ ಕುಕ್ಕರ್ ಬಾಂಬ್ ಸಿಡಿಸಿದವರು, ನೇಹಾಳನ್ನು ಕೊಂದವರು, ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಮನೆಗಳಿಗೆ ಬೆಂಕಿಯಿಟ್ಟವರೆಲ್ಲ ಕಾಂಗ್ರೆಸ್ ನಾಯಕರ ಭಾವನಾತ್ಮಕ ಸಹೋದರು ಎಂದು ರವಿ ಹೇಳಿದರು. ನೇಹಾ ಹಿರೇಮಠ ಹತ್ಯೆ ವೈಯಕ್ತಿಕ ಕಾರಣಗಳಿಗೆ ಆಗಿದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಅಂತ ಮಾಧ್ಯಮದವರು ಹೇಳಿದಾಗ ರವಿ, ಸಿಎಂ ಹೇಳಿಕೆಗೆ ಕಾಂಗ್ರೆಸ್ ಕಾರ್ಪೋರೇಟರ್ ಅಗಿರುವ ನೇಹಾ ತಂದೆಯೇ ಉತ್ತರ ನೀಡಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರು ತಮಗೆ ತೋಚಿದ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಯಾಕೆಂದರೆ, ಈ ಘಟನೆ ಯಾರದ್ದೋ ಮನೆಯಲ್ಲಿ ನಡೆದಿದೆ, ಅವರ ಮನೆಗಳಲ್ಲಿ ನಡೆದಿದ್ದರೆ ಸಂಕಟ ಏನು ಅನ್ನೋದು ಅರ್ಥವಾಗುತಿತ್ತು ಎಂದು ರವಿ ಹೇಳಿದರು. ರಾಮನಮಿ ದಿನ ಅವನ್ಯಾವನೋ ಒಬ್ಬ ಜೈ ಶ್ರೀರಾಮ್ ಅನ್ನುತ್ತಿದ್ದವರಿಗೆ ಅಲ್ಲಾಹ್ ಓ ಅಕ್ಬರ್ ಅನ್ನು ಅಂತಾನಂತೆ, ಯಾವ ದೇಶದಲ್ಲಿ ನಾವಿದ್ದ್ದೇವೆ ಅಂತ ರವಿ ಖಾರವಾಗಿ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕರ್ನಾಟಕವನ್ನು ಅಪಾಯಕ್ಕೆ ದೂಡಿದ ಸಿದ್ದರಾಮಯ್ಯ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಬಿಜೆಪಿ ಆಕ್ರೋಶ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.