ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್ಗೆ ಟಿವಿ9 ನವ ನಕ್ಷತ್ರ ಅವಾರ್ಡ್
ಟಿವಿ9 ನವ ನಕ್ಷತ್ರ ಸನ್ಮಾನ 2026 ಕಾರ್ಯಕ್ರಮದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ರನ್ನು ಸನ್ಮಾನಿಸಲಾಯಿತು. ಈ ವೇಳೆ ಮಾಡಿದ ಅವರು, ಟಿವಿ9 ಸಂಸ್ಥೆಯ ಬೆಳವಣಿಗೆಯನ್ನು ಸ್ಮರಿಸಿದರು. ತಮ್ಮ ಬರಹಗಳು ಈ ನಾಡಿನ ನೋವು-ಕನಸುಗಳನ್ನು ಪ್ರತಿನಿಧಿಸುತ್ತವೆ ಎಂದು ತಿಳಿಸಿದರು. ಕನ್ನಡ ಸಾಹಿತ್ಯವನ್ನು ಜಗತ್ತಿಗೆ ತಲುಪಿಸುವ ಜವಾಬ್ದಾರಿಯನ್ನು ಹಂಚಿಕೊಂಡರು.
ಬೆಂಗಳೂರು, ಫೆಬ್ರವರಿ 14: ನಗದರಲ್ಲಿ ನಡೆದ ಟಿವಿ9 ನವ ನಕ್ಷತ್ರ ಸನ್ಮಾನ 2026 ಕಾರ್ಯಕ್ರಮದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಭಾನು ಮುಷ್ತಾಕ್ ಅವರು, ಟಿವಿ9 ಸಂಸ್ಥೆಯು 18 ವರ್ಷಗಳ ಹಿಂದೆ ಹಾಸನದಲ್ಲಿ ಆರಂಭವಾದ ಸಂದರ್ಭವನ್ನು ಸ್ಮರಿಸಿದರು. ಮಾಧ್ಯಮ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳ ನಡುವೆಯೂ ಟಿವಿ9 ವಿಶ್ವಾಸಾರ್ಹ ಸುದ್ದಿವಾಹಿನಿಯಾಗಿ ನಿಂತಿದೆ ಎಂದು ಶ್ಲಾಘಿಸಿದರು. ಬೂಕರ್ ಪ್ರಶಸ್ತಿ ಘೋಷಣೆಯ ನಂತರದ ತಮ್ಮ ಅನುಭವಗಳನ್ನು ಹಂಚಿಕೊಂಡ ಅವರು, ಕನ್ನಡ ಸಾಹಿತ್ಯದ ಸಾರವನ್ನು ಜಗತ್ತಿನ ಮೂಲೆ ಮೂಲೆಗೆ ತಲುಪಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವುದಾಗಿ ಹೇಳಿದರು. ಕನ್ನಡದ ಮನಸ್ಥಿತಿ, ಮಾನವೀಯತೆ ಮತ್ತು ಮನುಷ್ಯ ಪ್ರೀತಿಯನ್ನು ವಿಶ್ವಕ್ಕೆ ತಲುಪಿಸುವ ಕಾರ್ಯದಲ್ಲಿ ನಿರತರಾಗಿರುವುದಾಗಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

