ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​

Updated on: Feb 14, 2026 | 8:54 PM

ಟಿವಿ9 ನವ ನಕ್ಷತ್ರ ಸನ್ಮಾನ 2026 ಕಾರ್ಯಕ್ರಮದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್​​ರನ್ನು ಸನ್ಮಾನಿಸಲಾಯಿತು. ಈ ವೇಳೆ ಮಾಡಿದ ಅವರು, ಟಿವಿ9 ಸಂಸ್ಥೆಯ ಬೆಳವಣಿಗೆಯನ್ನು ಸ್ಮರಿಸಿದರು. ತಮ್ಮ ಬರಹಗಳು ಈ ನಾಡಿನ ನೋವು-ಕನಸುಗಳನ್ನು ಪ್ರತಿನಿಧಿಸುತ್ತವೆ ಎಂದು ತಿಳಿಸಿದರು. ಕನ್ನಡ ಸಾಹಿತ್ಯವನ್ನು ಜಗತ್ತಿಗೆ ತಲುಪಿಸುವ ಜವಾಬ್ದಾರಿಯನ್ನು ಹಂಚಿಕೊಂಡರು.

ಬೆಂಗಳೂರು, ಫೆಬ್ರವರಿ 14: ನಗದರಲ್ಲಿ ನಡೆದ ಟಿವಿ9 ನವ ನಕ್ಷತ್ರ ಸನ್ಮಾನ 2026 ಕಾರ್ಯಕ್ರಮದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಭಾನು ಮುಷ್ತಾಕ್ ಅವರು, ಟಿವಿ9 ಸಂಸ್ಥೆಯು 18 ವರ್ಷಗಳ ಹಿಂದೆ ಹಾಸನದಲ್ಲಿ ಆರಂಭವಾದ ಸಂದರ್ಭವನ್ನು ಸ್ಮರಿಸಿದರು. ಮಾಧ್ಯಮ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳ ನಡುವೆಯೂ ಟಿವಿ9 ವಿಶ್ವಾಸಾರ್ಹ ಸುದ್ದಿವಾಹಿನಿಯಾಗಿ ನಿಂತಿದೆ ಎಂದು ಶ್ಲಾಘಿಸಿದರು. ಬೂಕರ್ ಪ್ರಶಸ್ತಿ ಘೋಷಣೆಯ ನಂತರದ ತಮ್ಮ ಅನುಭವಗಳನ್ನು ಹಂಚಿಕೊಂಡ ಅವರು, ಕನ್ನಡ ಸಾಹಿತ್ಯದ ಸಾರವನ್ನು ಜಗತ್ತಿನ ಮೂಲೆ ಮೂಲೆಗೆ ತಲುಪಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವುದಾಗಿ ಹೇಳಿದರು. ಕನ್ನಡದ ಮನಸ್ಥಿತಿ, ಮಾನವೀಯತೆ ಮತ್ತು ಮನುಷ್ಯ ಪ್ರೀತಿಯನ್ನು ವಿಶ್ವಕ್ಕೆ ತಲುಪಿಸುವ ಕಾರ್ಯದಲ್ಲಿ ನಿರತರಾಗಿರುವುದಾಗಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More