ಕುಟುಂಬ ಸಮೇತ ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್
ಚಿಕ್ಕಂದಿನಿಂದಲೂ ಹಾಸನಾಂಬೆಯ ದರ್ಶನವನ್ನು ನಾನು ಪಡೆಯುತ್ತಿದ್ದೇನೆ. ನಮ್ಮ ಮನೆ ಮುಂದಿನ ಬೀದಿಯಲ್ಲಿದ್ದು, ತಾಯಿಯ ಕೈ ಬೆರಳು ಹಿಡಿದುಕೊಂಡು ದೇವಿ ದರ್ಶನಕ್ಕೆ ಬರುತ್ತಿದ್ದೆ. ಆಗ ಯಾರಿಗೂ ಅದು ಗೊತ್ತಾಗುತ್ತಿರಲಿಲ್ಲ ಎಂದು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಹೇಳಿದ್ದಾರೆ. ಕುಟುಂಬ ಸಮೇತ ಆಗಮಿಸಿ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದ್ದಾರೆ.
ಹಾಸನ, ಅಕ್ಟೋಬರ್ 15: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ (Banu Mushtaq) ಕುಟುಂಬ ಸಮೇತರಾಗಿ ಬಂದು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಆ ಬಳಿಕ ಮಾತನಾಡಿದ ಅವರು, ಇದೇನು ಮೊದಲ ಬಾರಿಗೆ ಹಾಸನಾಂಬೆಯ ದರ್ಶನವನ್ನು ನಾನು ಪಡೆಯುತ್ತಿಲ್ಲ. ನಮ್ಮ ಮನೆ ಮುಂದಿನ ಬೀದಿಯಲ್ಲಿದ್ದು, ಚಿಕ್ಕಂದಿನಿಂದಲೂ ತಾಯಿಯ ಕೈ ಬೆರಳು ಹಿಡಿದುಕೊಂಡು ದೇವಿ ದರ್ಶನಕ್ಕೆ ಬರುತ್ತಿದ್ದೆ. ಆಗ ಯಾರಿಗೂ ಅದು ಗೊತ್ತಾಗುತ್ತಿರಲಿಲ್ಲ. ಇದು ಭಾವೈಕ್ಯತೆಯ ಸ್ಥಳವಾಗಿದ್ದು ಮುಸ್ಲಿಂ ಸಮುದಾಯದವರೂ ಬಹಳಷ್ಟು ಮಂದಿ ಹಿಂದೆ ಇಲ್ಲಿಗೆ ಬರುತ್ತಿದ್ದರು. ಈಗಲೂ ಕೆಲವರು ಬರುತ್ತಾರೆ ಎಂದು ಬಾನು ಮುಷ್ತಾಕ್ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
