Video: ಭಾರತದ ದಾಳಿಯಿಂದ ಭಯಗೊಂಡು ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ

Updated on: May 08, 2025 | 9:09 AM

ಭಾರತದ ಆಪರೇಷನ್ ಸಿಂಧೂರ್ ನಂತರ, ಪಾಕಿಸ್ತಾನದ ಭೀತಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದು ಎಲ್‌ಒಸಿ ಪಕ್ಕದ ಹಳ್ಳಿಗಳ ಬಳಿ ಕದನ ವಿರಾಮ ಉಲ್ಲಂಘನೆಯನ್ನು ಹೆಚ್ಚಿಸಿದೆ. ಇದಕ್ಕೆ ಸೇನೆಯು ಸೂಕ್ತ ಉತ್ತರವನ್ನು ನೀಡುತ್ತಿದೆ. ಭಾರತದ ದಾಳಿಯಿಂದ ಭಯಗೊಂಡು ಜನರು ಸಿಯಾಲ್​ಕೋಟ್​ ತೊರೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಸಿಯಾಲ್‌ಕೋಟ್‌ನ ಬಜ್ವತ್ ವಲಯದ ಗಡಿ ಗ್ರಾಮಗಳಲ್ಲಿ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ

ಇಸ್ಲಾಮಾಬಾದ್,ಮೇ 08: ಭಾರತದ ಆಪರೇಷನ್ ಸಿಂಧೂರ್ ನಂತರ, ಪಾಕಿಸ್ತಾನದ ಭೀತಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದು ಎಲ್‌ಒಸಿ ಪಕ್ಕದ ಹಳ್ಳಿಗಳ ಬಳಿ ಕದನ ವಿರಾಮ ಉಲ್ಲಂಘನೆಯನ್ನು ಹೆಚ್ಚಿಸಿದೆ. ಇದಕ್ಕೆ ಸೇನೆಯು ಸೂಕ್ತ ಉತ್ತರವನ್ನು ನೀಡುತ್ತಿದೆ. ಭಾರತದ ದಾಳಿಯಿಂದ ಭಯಗೊಂಡು ಜನರು ಸಿಯಾಲ್​ಕೋಟ್​ ತೊರೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಸಿಯಾಲ್‌ಕೋಟ್‌ನ ಬಜ್ವತ್ ವಲಯದ ಗಡಿ ಗ್ರಾಮಗಳಲ್ಲಿ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಸಿಯಾಲ್‌ಕೋಟ್‌ನಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರದೇಶದಾದ್ಯಂತ ತುರ್ತು ಸೈರನ್‌ಗಳನ್ನು ಮೊಳಗಿಸಲಾಯಿತು ಮತ್ತು ಪದೇ ಪದೇ ಸಾರ್ವಜನಿಕ ಘೋಷಣೆಗಳನ್ನು ಮಾಡಲಾಗುತ್ತಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: May 08, 2025 09:07 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More