‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?

Updated on: Jun 04, 2026 | 10:40 PM

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೋಲಿಕೆ ಇರುವಂತಹ ಕಥೆ ಇದೆ ಎಂಬ ಕಾರಣಕ್ಕೆ ‘ಬಾಸ್’ ಚಿತ್ರವು ವಿವಾದಕ್ಕೆ ಕಾರಣ ಆಗಿದೆ. ಈ ಚಿತ್ರದ ಮೇಲಿದ್ದ ತಡೆಯನ್ನು ನ್ಯಾಯಾಲಯ ತೆರವು ಮಾಡಿದೆ. ನಿರ್ದೇಶಕ ಲವ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ವಾಣಿಜ್ಯ ಮಂಡಳಿಯಿಂದ ತಮಗೆ ಬಂದ ನೋಟಿಸ್ ಬಗ್ಗೆಯೂ ಅವರು ಮಾತನಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೋಲಿಕೆ ಇರುವಂತಹ ಕಥೆ ಇದೆ ಎಂಬ ಕಾರಣಕ್ಕೆ ‘ಬಾಸ್’ (Boss) ಚಿತ್ರವು ವಿವಾದಕ್ಕೆ ಕಾರಣ ಆಗಿದೆ. ನಟ ದರ್ಶನ್ ಅವರು ಈ ಸಿನಿಮಾ ತಂಡಕ್ಕೆ ನೋಟಿಸ್ ನೀಡಿದ್ದರು. ಆದರೆ ಚಿತ್ರದ ಮೇಲಿದ್ದ ತಡೆಯನ್ನು ನ್ಯಾಯಾಲಯ ತೆರವು ಮಾಡಿದೆ. ಹಾಗಾಗಿ ನಿರ್ದೇಶಕ ಲವ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ವಾಣಿಜ್ಯ ಮಂಡಳಿಯಿಂದ ತಮಗೆ ಬಂದ ನೋಟಿಸ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ವಕೀಲರಾದ ನೀವು ಸಿನಿಮಾ ಮಾಡಿದ್ದೀರಿ. ನಿಮ್ಮ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜಯಮಾಲಾ ಅವರು ನಮಗೆ ನೋಟಿಸ್ ನೀಡಿದ್ದಾರೆ. ಅದಕ್ಕೂ ಬಾಸ್ ಸಿನಿಮಾ ವಿವಾದಕ್ಕೂ ಸಂಬಂಧ ಇಲ್ಲ’ ಎಂದು ನಿರ್ದೇಶಕ ಲವ ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ‘ಬಾಸ್’ ಸಿನಿಮಾದ ನಾಯಕ ನಟ ತನುಷ್ ಶಿವಣ್ಣ ಕೂಡ ಭಾಗಿಯಾಗಿದ್ದರು. ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More