‘ಬಾಸ್’ ಸಿನಿಮಾದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
‘ಬಾಸ್’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ತನುಶ್ ಶಿವಣ್ಣ ಅಭಿನಯದ ಈ ಸಿನಿಮಾಗೆ ವಿ. ಲವ ನಿರ್ದೇಶನ ಮಾಡಿದ್ದಾರೆ. ಟೀಸರ್ ನೋಡಿದ ಎಲ್ಲರಿಗೂ ಅಚ್ಚರಿ ಆಗಿದೆ. ಯಾಕೆಂದರೆ, ಕಥೆಯ ಎಳೆ ನೋಡಿದರೆ ರೇಣುಕಾಸ್ವಾಮಿ ಕೊಲೆ ಪ್ರಕರಣ ನೆನಪಿಗೆ ಬರುತ್ತದೆ. ಆ ನಿರ್ದೇಶಕರು ಲವ ಪ್ರತಿಕ್ರಿಯೆ ನೀಡಿದ್ದಾರೆ.
ತನುಶ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾದ ಟೀಸರ್ (Boss Movie Teaser) ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ವಿ. ಲವ ಅವರು ನಿರ್ದೇಶನ ಮಾಡಿದ್ದಾರೆ. ಟೀಸರ್ ನೋಡಿದ ಎಲ್ಲರಿಗೂ ಅಚ್ಚರಿ ಆಗಿದೆ. ಕಥೆಯ ಎಳೆ ನೋಡಿದರೆ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣ ನೆನಪಿಗೆ ಬರುತ್ತದೆ. ಆ ಬಗ್ಗೆ ನಿರ್ದೇಶಕ ಲವ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದು ದರ್ಶನ್ (Darshan) ಪ್ರಕರಣದ ಕುರಿತಾದ ಸಿನಿಮಾ ಅಲ್ಲ ಎಂದು ಅವರು ಹೇಳಿದ್ದಾರೆ. ‘ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಅದರ ಬಗ್ಗೆ ಸಿನಿಮಾ ಮಾಡಬಾರದು. ನಾನು ದರ್ಶನ್ ಅವರ ಕಥೆಯನ್ನು ಸಿನಿಮಾ ಮಾಡುತ್ತಿಲ್ಲ. ಸಮಾಜದಲ್ಲಿ ನಡೆಯುವ ಅನೇಕ ಘಟನೆಗಳನ್ನು ಒಟ್ಟಿಗೆ ಸೇರಿಸಿ ಮಾಡಿದ ಸಿನಿಮಾ ಇದು. ನಾನು ಕೂಡ ದರ್ಶನ್ ಅವರ ಅಭಿಮಾನಿ. ಹಾಗಾಗಿ ಫ್ಯಾನ್ಸ್ ನಮಗೆ ತೊಂದ್ರೆ ಕೊಡುವ ಪ್ರಮೇಯವೇ ಬರಲ್ಲ’ ಎಂದು ಲವ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
