‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ಚಿತ್ರದ ನಿರ್ದೇಶಕ

Updated on: Mar 17, 2026 | 8:24 AM

‘ಬಾಸ್’ ಸಿನಿಮಾ ಸದ್ಯ ವಿವಾದ ಸೃಷ್ಟಿಸಿದೆ. ಈ ಚಿತ್ರದಲ್ಲಿ ದರ್ಶನ್ ಕಥೆಯನ್ನು ಹೇಳಲಾಗುತ್ತಿದೆ ಎಂದು ಹೇಳಲಾಗುತ್ತಾ ಇದೆ. ಆದರೆ, ಇದನ್ನು ಚಿತ್ರದ ನಿರ್ದೇಶಕ ವಿ. ಲವ ಅಲ್ಲ ಗಳೆದಿದ್ದಾರೆ. ಟಿವಿ9 ಕನ್ನಡದ ಜೊತೆಗೆ ಮಾತನಾಡಿರೋ ಅವರು ವಿಜಯಲಕ್ಷ್ಮೀಗೆ ಸಿನಿಮಾ ತೋರಿಸೋಕೆ ರೆಡಿ ಎಂದಿದ್ದಾರೆ.

ನಟ ದರ್ಶನ್ ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ ಅಲ್ಲಿ ಅರೆಸ್ಟ್ ಆಗಿದ್ದಾರೆ. ಹೀಗಿರುವಾಗಲೇ ‘ಬಾಸ್’ ಹೆಸರಿನ ಸಿನಿಮಾ ಬರುತ್ತಿದೆ. ಟೀಸರ್ ನೋಡಿದವರಿಗೆ ಇದು ರೇಣುಕಾಸ್ವಾಮಿ ಕೊಲೆ ಕೇಸ್ ರೀತಿ ಭಾಸವಾಗಿದೆ. ಈ ಪ್ರಕರಣದ ಬಗ್ಗೆ ಚಿತ್ರದ ನಿರ್ದೇಶಕ ಲವ ಮಾತನಾಡಿದ್ದಾರೆ. ‘ಈ ಚಿತ್ರಕ್ಕೂ ದರ್ಶನ್ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ಲವ ಹೇಳಿದ್ದಾರೆ. ಜೊತೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಿನಿಮಾ ನೋಡ್ತಾರೆ ಎಂದರೆ ಅವರಿಗೆ ಚಿತ್ರ ತೋರಿಸೋಕೆ ರೆಡಿ ಎಂದು ಲವ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More