‘ಬಾಸ್’ ಸಿನಿಮಾ ರಿಲೀಸ್​​ಗೆ ವಿರೋಧ; ಬೇಸರ ಹೊರಹಾಕಿದ ನಿರ್ದೇಶಕ

Edited By:

Updated on: Jun 18, 2026 | 8:28 AM

‘ಬಾಸ್’ ಹೆಸರಿನ ಸಿನಿಮಾ ಸದ್ಯ ಸ್ಯಾಂಡಲ್​​ವುಡ್​​ನಲ್ಲಿ ಸದ್ದು ಮಾಡುತ್ತಿದೆ. ಈ ಸಿನಿಮಾ ಶೀಘ್ರವೇ ರಿಲೀಸ್ ಆಗಬೇಕಿತ್ತು. ಆದರೆ, ಇದರ ರಿಲೀಸ್​​ಗೆ ತಂಡ ಅಪಸ್ವರ ತೆಗೆದಿದೆ. ಈ ಸಿನಿಮಾಗೆ ಭಾರೀ ವಿರೋಧ ವ್ಯಕ್ತವಾಗಿದೆ ಎಂದು ವರದಿ ಆಗಿದೆ. ಈ ಬಗ್ಗೆ ನಿರ್ದೇಶಕರು ಬೇಸರ ಹೊರಹಾಕಿದ್ದಾರೆ. ನಮ್ಮ ಸಿನಿಮಾ ರಿಲೀಸ್​​ಗೆ ಈ ರೀತಿ ಮಾಡಿದ್ದು ಸರಿ ಅಲ್ಲ ಎಂದು ಅವರು ಹೇಳುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಾಸ್’ ಸಿನಿಮಾ ರಿಲೀಸ್​​ಗೆ ವಿರೋಧ ವ್ಯಕ್ತವಾಗಿದೆ. ಸಿನಿಮಾ ರಿಲೀಸ್ ಆಗಬಾರದು ಎಂದು ವಿಜಯಲಕ್ಷ್ಮೀ ದರ್ಶನ್ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಿನಿಮಾದ ಕಥೆ ರೇಣುಕಾಸ್ವಾಮಿ ಕೊಲೆ ಕೇಸ್ ಆಧರಿಸಿದೆ ಎಂಬ ಅನುಮಾನ ಇದೆ. ಈ ಕಾರಣಕ್ಕೆ ರಿಲೀಸ್​​ಗೆ ವಿರೋಧ ಇದೆ. ಈ ವಿಷಯವಾಗಿ ಸಿನಿಮಾದ ನಿರ್ದೇಶಕ ಲವ ಬೇಸರ ಹೊರಹಾಕಿದ್ದಾರೆ. ಈ ಮೊದಲು ಸೆಷನ್ಸ್ ಕೋರ್ಟ್​​ನಲ್ಲಿ ‘ಬಾಸ್’ ಸಿನಿಮಾಗೆ ತಡೆ ಕೋರಿ ವಿಜಯಲಕ್ಷ್ಮಿ ದರ್ಶನ್ ಸಲ್ಲಿಸಿದ ಅರ್ಜಿ ವಜಾಗೊಂಡಿತ್ತು. ಅದರಿಂದ ಚಿತ್ರತಂಡಕ್ಕೆ ಬಲ ಸಿಕ್ಕಂತೆ ಆಗಿತ್ತು.ಈಗ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದರಿಂದ ತಂಡ ಚಿಂತೆಗೆ ಒಳಗಾಗಿದೆ. ಈ ಬಗ್ಗೆ ಅವು ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ 

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More