‘ಕಾಂಪೌಂಡ್ ಬಳಿ ಕೂತು ವ್ಯಾಪಾರ ಮಾಡಬೇಡಿ’: ಬೌರಿಂಗ್ ಆಸ್ಪತ್ರೆ ದುರಂತದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ನೋಡಿ
ಬೆಂಗಳೂರಿನಲ್ಲಿ ನಡೆದ ಕಾಂಪೌಂಡ್ ಕುಸಿತದಲ್ಲಿ ಏಳು ಮಂದಿ ಸಾವನ್ನಪ್ಪಿದ ಘಟನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಘಟನೆಗೆ ಹಳೆಯ ಅಥವಾ ಕಳಪೆ ನಿರ್ಮಾಣ ಕಾರಣ ಎಂದು ಹೇಳಲಾಗುತ್ತಿದೆ ಎಂದ ಅವರು, ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಹಾಗೂ ಬೀದಿ ವ್ಯಾಪಾರಿಗಳಿಗೆ ಸುರಕ್ಷಿತ ಸ್ಥಳ ಒದಗಿಸುವಂತೆ ಆಗ್ರಹಿಸಿದರು. ಇಂಥ ಘಟನೆಗಳ ಪುನರಾವರ್ತನೆ ತಪ್ಪಿಸಲು ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
ಕಲಬುರಗಿ, ಏಪ್ರಿಲ್ 30: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದುಬಿದ್ದು ಏಳು ಮಂದಿ ಮೃತಪಟ್ಟ ಘಟನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಪೌಂಡ್ ಹಳೆಯದಾಗಿತ್ತು ಅಥವಾ ಕಳಪೆ ಗುಣಮಟ್ಟದಿಂದ ನಿರ್ಮಿಸಲಾಗಿತ್ತು ಎಂದು ಹೇಳಲಾಗುತ್ತಿದೆ ಎಂದರು. ಕುಸಿದ ಕಾಂಪೌಂಡ್ ಸರಿಪಡಿಸಲು ಮತ್ತು ಕಾಯಿಪಲ್ಲೆ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.
ಭವಿಷ್ಯದಲ್ಲಿ ಇಂತಹ ಅನಾಹುತಗಳು ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು. ಕಾಂಪೌಂಡ್‌ಗಳ ಬಳಿ ಬೀದಿ ವ್ಯಾಪಾರಕ್ಕೆ ಅವಕಾಶ ನೀಡಬಾರದು. ಕಾಂಪೌಂಡ್‌ಗಳ ಬಳಿ ಯಾರೂ ಮಾರಾಟ ಮಾಡಬೇಡಿ ಎಂದು ಖರ್ಗೆ ಮನವಿ ಮಾಡಿದರು. ಪುಟ್ಪಾತ್ ಮೇಲೆ ವ್ಯಾಪಾರ ಮಾಡುವ ಸಣ್ಣ ವ್ಯಾಪಾರಿಗಳ ಸಮಸ್ಯೆಗಳನ್ನು ನಾವು ಅರ್ಥಮಾಡಿಕೊಳ್ಳಬೇಕು. ಅವರನ್ನು ಅಲ್ಲಿಂದ ತೆರವುಗೊಳಿಸಲು ಹೋದರೆ, ‘ನಮ್ಮ ಹೊಟ್ಟೆ ಮೇಲೆ ಹೊಡೆಯುತ್ತಿದ್ದೀರಿ’ ಎನ್ನುತ್ತಾರೆ. ಆದರೆ ನಗರದ ನಾಗರಿಕರಿಗೆ ಅನಾನುಕೂಲವಾಗಬಾರದು. ಮುನ್ಸಿಪಾಲಿಟಿಗಳು ಅವರಿಗೆ ಯೋಗ್ಯವಾದ ಸ್ಥಳಗಳನ್ನು ಒದಗಿಸಬೇಕು. ಇಂದು ಬೆಂಗಳೂರಿನಲ್ಲಿ ನಡೆದಂತೆ ನಾಳೆ ಇನ್ನೊಂದು ಕಡೆ ಆಗದಂತೆ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಿಗ್ ವರ್ಕರ್‌ಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಸಹಾಯ ಮಾಡಬೇಕು ಎಂದು ಖರ್ಗೆ ಒತ್ತಾಯಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ

