ಪೊಲೀಸ್​ ಠಾಣೆಯಲ್ಲಿ ಬಾಲಕ, ಆತನ ಅಜ್ಜಿಯನ್ನು ಮನಬಂದಂತೆ ಥಳಿಸಿದ ಪೊಲೀಸರು

Updated on: Aug 29, 2024 | 8:49 AM

ಮಧ್ಯಪ್ರದೇಶದ ರೈಲ್ವೇ ಪೊಲೀಸ್ ಠಾಣೆಯೊಳಗೆ 15 ವರ್ಷದ ಬಾಲಕ ಮತ್ತು ಆತನ ಅಜ್ಜಿಯನ್ನು ಅಧಿಕಾರಿಗಳು ಥಳಿಸಿದ ವಿಡಿಯೋವೊಂದು ಹೊರಬಿದ್ದಿದ್ದು, ಕೋಲಾಹಲ ಎಬ್ಬಿಸಿದೆ. ವಿವಾದದ ನಡುವೆಯೇ ಓರ್ವ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.

ಜಬಲ್‌ಪುರದ ಕಟ್ನಿ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ನಿಲ್ದಾಣದ ಉಸ್ತುವಾರಿ ಅಧಿಕಾರಿ ಅರುಣಾ ವಗಾನೆ, ಮಹಿಳೆ ಕುಸುಮ್ ವಂಸ್ಕರ್‌ಗೆ ಕೋಲಿನಿಂದ ಹೊಡೆಯುವುದಲ್ಲದೆ ಒದೆಯುವುದನ್ನು ವಿಡಿಯೋದಲ್ಲಿ ಕಾಣಬಹುದು. ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ವಿವಾದದ ಬೆನ್ನಲ್ಲೇ ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More