ಬೆಂಗಳೂರಿನಲ್ಲಿ ಹಿಟ್​​ ಆ್ಯಂಡ್​​ ರನ್​ಗೆ ಬಾಲಕ ಬಲಿ; ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 21, 2023 | 3:07 PM

ಬೆಂಗಳೂರಿನ ಬಾಗಲೂರು ಮುಖ್ಯರಸ್ತೆಯಲ್ಲಿ ಸೆ.17ರ ರಾತ್ರಿ 11.30ಕ್ಕೆ ರಸ್ತೆ ದಾಟುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು. ಅದರ ರಭಸಕ್ಕೆ ಬಹು ಎತ್ತರಕ್ಕೆ ಹಾರಿಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು ಬಾಲಕನಿಗೆ ಡಿಕ್ಕಿ ಹೊಡೆದು, ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ.

ಬೆಂಗಳೂರು, ಸೆ.21: ಹಿಟ್​​ ಆ್ಯಂಡ್​ ರನ್(Hit And Run)​ಗೆ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಿನ (Bengaluru) ಬಾಗಲೂರು ಮುಖ್ಯರಸ್ತೆಯಲ್ಲಿ ಸೆ.17ರ ರಾತ್ರಿ 11.30ಕ್ಕೆ ನಡೆದಿದೆ. ರಸ್ತೆ ದಾಟುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು. ಅದರ ರಭಸಕ್ಕೆ ಬಹು ಎತ್ತರಕ್ಕೆ ಹಾರಿಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು ಬಾಲಕನಿಗೆ ಡಿಕ್ಕಿ ಹೊಡೆದು, ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಈ ಭಯಾನಕ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ