ಬೆಂಗಳೂರು: ದೇವಸ್ಥಾನದ ಗೇಟ್ ಮುರಿದು ಬಿದ್ದು ಬಾಲಕನ ಕಾಲು ಮುರಿತ

Updated on: Nov 03, 2025 | 2:29 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಾಕಳಿಯ ಬೈಲಾಂಜನೇಯ ಸ್ವಾಮಿ ದೇಗುಲದಲ್ಲಿ ಗೇಟ್ ಕುಸಿದು ಬಿದ್ದ ಪರಿಣಾಮ ಬಾಲಕ ಲೋಹಿತ್ ನಾಯಕ್ ಕಾಲು ಮುರಿದುಕೊಂಡಿದ್ದಾನೆ. ತುಕ್ಕು ಹಿಡಿದು ಬೀಳುವ ಸ್ಥಿತಿಯಲ್ಲಿದ್ದ ಗೇಟ್ ಅನ್ನು ಪರಿಶೀಲಿಸದ ಮುಜರಾಯಿ ಇಲಾಖೆಯ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಕ ಈಗ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಬೆಂಗಳೂರು, ನವೆಂಬರ್ 3: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಾಕಳಿಯ ಬೈಲಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗೇಟ್ ಕುಸಿದು ಬಿದ್ದ ಪರಿಣಾಮ ಬಾಲಕನೋರ್ವನ ಕಾಲು ಮುರಿದಿದೆ. ಈ ಘಟನೆ ಮುಜರಾಯಿ ಇಲಾಖೆಯ ಬೇಜವಾಬ್ದಾರಿತನಕ್ಕೆ ಸ್ಪಷ್ಟ ನಿದರ್ಶನವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಕಳಿ ಗೇಟ್ ಬಳಿ ಆಟವಾಡುತ್ತಿದ್ದ ಬಾಲಕ ಲೋಹಿತ್ ನಾಯಕ್ ಮೇಲೆ ದೇವಸ್ಥಾನದ ಪ್ರವೇಶದ್ವಾರದ ಗೇಟ್ ಅನಿರೀಕ್ಷಿತವಾಗಿ ಕುಸಿದು ಬಿದ್ದಿದೆ. ಈ ಆಘಾತದಿಂದ ಬಾಲಕನ ಕಾಲು ಮುರಿದಿದ್ದು, ತೀವ್ರವಾಗಿ ಗಾಯಗೊಂಡಿದ್ದಾನೆ. ಆಟವಾಡಿಕೊಂಡು ಖುಷಿಯಾಗಿರಬೇಕಿದ್ದ ಬಾಲಕ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸ್ಥಿತಿ ಬಂದಿದೆ.

ಕುಸಿದ ಗೇಟ್ ಸಂಪೂರ್ಣವಾಗಿ ತುಕ್ಕು ಹಿಡಿದಿದ್ದು, ಯಾವುದೇ ಕ್ಷಣದಲ್ಲಿ ಬೀಳುವ ಸ್ಥಿತಿಯಲ್ಲಿತ್ತು. ಆದಾಗ್ಯೂ, ಸಂಬಂಧಪಟ್ಟ ಅಧಿಕಾರಿಗಳು ಅಥವಾ ಮುಜರಾಯಿ ಇಲಾಖೆಯು ಇದರ ಸುರಕ್ಷತೆಯನ್ನು ಪರಿಶೀಲಿಸುವ ಗೋಜಿಗೆ ಹೋಗಿಲ್ಲ. ಈ ನಿರ್ಲಕ್ಷ್ಯದ ಪರಿಣಾಮವಾಗಿ ಮುಗ್ಧ ಬಾಲಕನಿಗೆ ಗಂಭೀರ ಗಾಯವಾಗಿದ್ದು, ಇಲಾಖೆಯ ಕಾರ್ಯವೈಖರಿ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More