ಸೆಪ್ಟೆಂಬರ್​ನಲ್ಲಿ ಕೇವಲ ಅರ್ಹರಿಗೆ ಮಾತ್ರ ಹೊಸ ಬಿಪಿಎಲ್ ಕಾರ್ಡ್​ಗಳ ವಿತರಣೆ: ಕೆ ಹೆಚ್ ಮುನಿಯಪ್ಪ

ರಾಜ್ಯದಲ್ಲಿ ಸುಮಾರು 15 ಲಕ್ಷ ಜನ ಎಪಿಎಲ್ ಕಾರ್ಡುದಾರರಿದ್ದು ಅವರಲ್ಲಿ ಸುಮಾರು ಎರಡು ಲಕ್ಷ ಜನ ಮಾತ್ರ ಅಕ್ಕಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ ಕೆಹೆಚ್ ಮುನಿಯಪ್ಪ, ಈ ಕಾರ್ಡನ್ನು ಹೊಂದಿದವರಿಗೆ ಕಡಿಮೆ ದರದಲ್ಲಿ ಅಕ್ಕಿ ಒದಗಿಸುವ ಕೆಲಸ ತಮ್ಮ ಇಲಾಖೆಯಿಂದ ನಡೆಯುತ್ತಿದೆ ಎಂದರು.

ಸೆಪ್ಟೆಂಬರ್​ನಲ್ಲಿ ಕೇವಲ ಅರ್ಹರಿಗೆ ಮಾತ್ರ ಹೊಸ ಬಿಪಿಎಲ್ ಕಾರ್ಡ್​ಗಳ ವಿತರಣೆ: ಕೆ ಹೆಚ್ ಮುನಿಯಪ್ಪ
|

Updated on: Aug 14, 2024 | 12:30 PM

ದೆಹಲಿ: ನಗರದಲ್ಲಿಂದು ಟಿವಿ9 ಪ್ರತಿನಿಧಿಯೊಂದಿಗೆ ಮಾತಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಹೆಚ್ ಮುನಿಯಪ್ಪ ಅವರು ರಾಜ್ಯದಲ್ಲಿ ಹೊಸ ಬಿಪಿಎಲ್ ಕಾರ್ಡುಗಳಿಗಾಗಿ ಅರ್ಜಿಗಳು ಬರುತ್ತಿವೆ, ತಮ್ಮ ಇಲಾಖೆಯು ಅರ್ಜಿಗಳ ಪರಿಷ್ಕರಣೆ ನಡೆಸಿ ಅರ್ಹರಿಗೆ ಮಾತ್ರ ಕಾರ್ಡುಗಳನ್ನು ವಿತರಿಸಲಿದೆ ಎಂದು ಹೇಳಿದರು. ಸುಮಾರು 90,000 ಜನ ಅರ್ಜಿ ಸಲ್ಲಿಸಿದ್ದು, ದಾಖಲಾತಿಗಳನ್ನು ಸೂಕ್ತವಾಗಿ ಪರಿಶೀಲಿಸಿ ಸೆಪ್ಟಂಬರ್ ತಿಂಗಳಲ್ಲಿ ಹೊಸ ಕಾರ್ಡ್ ಗಳನ್ನು ವಿತರಿಸುವ ಕೆಲಸ ಪ್ರಾರಂಭಿಸಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದರು. ಬಿಪಿಲ್ ಕಾರ್ಡ್ ಗಳ ಸಂಖ್ಯೆ ಹೆಚ್ಚುವ ಅಥವಾ ಕಡಿಮೆಯಾಗುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ ಅವರು ಕುಟುಂಬವೊಂದರ ಸದಸ್ಯರು ಒಂದೇ ಮನೆಯಲ್ಲಿ ವಾಸವಾಗಿರದೆ ಬೇರೆ ಬೇರೆ ಮನೆಗಳಲ್ಲಿ ವಾಸ ಮಾಡುತ್ತಾ ಕಾರ್ಡುಗಳಿಗೆ ಅರ್ಜಿ ಸಲ್ಲಿಸಿದ್ದರೆ ಅವರು ಪ್ರತ್ಯೇಕವಾಗಿ ವಾಸ ಮಾಡುತ್ತಿರುವ ಬಗ್ಗೆ ಸಂಬಂಧಪಟ್ಟ ತಹಸೀಲ್ದಾರ ಆಹಾರ ಮತ್ತು ನಾಗರಿಕ ಪೂರೈಕೆಗೆ ಇಲಾಖೆಗೆ ದೃಢೀಕರಿಸಬೇಕಾಗುತ್ತದೆ, ಅವರ ದೃಢೀಕರಣದ ನಂತರವೇ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ

Follow us