ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರ ಇದೇ ಕೊನೆ: ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ

Edited By:

Updated on: Oct 10, 2025 | 2:24 PM

ಕರ್ನಾಟಕ ಸಿಎಂ ಸಿದ್ದರಾಮಯ್ಯ ಬಗ್ಗೆ ಹಾಸನದಲ್ಲಿ ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ರಾಜಕೀಯ ಕ್ರಾಂತಿ ವಿಚಾರ ಸೇರಿ ಮುಂದೆ ಸಿಎಂ ಯಾರು ಆಗಬಹುದು ಎಂಬ ಬಗ್ಗೆಯೂ ಅವರು ತಿಳಿಸಿದ್ದಾರೆ. ಜೊತೆಗೆ ಕರ್ನಾಟಕದಲ್ಲಿ ಈಗ ಅಧಿಕಾರದಲ್ಲಿರೋ ಕಾಂಗ್ರೆಸ್​ ಪಕ್ಷದ ಭವಿಷ್ಯದ ಬಗ್ಗೆಯೂ ಹೇಳಿದ್ದಾರೆ.

ಹಾಸನ, ಅಕ್ಟೋಬರ್​ 10: ರಾಜ್ಯ ರಾಜಕಾರಣದ ಬಗ್ಗೆ ಬ್ರಹ್ಮಾಂಡ ಗುರೂಜಿ (Brahmanda Guruji) ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸಂಕ್ರಾಂತಿ ಒಳಗೆ ರಾಜಕೀಯ ಕ್ರಾಂತಿ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆರೋಗ್ಯ ಕ್ಷೀಣಿಸುವ ಸಾಧ್ಯತೆ ಇದ್ದು, ಅವರ ಬಳಿಕ ಇಬ್ಬರಿಗೆ ಸಿಎಂ ಆಗುವ ಯೋಗ ಇದೆ. ಆದರೆ ಬಹಳ ಹಗ್ಗ ಜಗ್ಗಾಟ ನಡೆಯಲಿದ್ದು, ಈಗ ಮುಖ್ಯಮಂತ್ರಿ ಸ್ಥಾನ ಸಿಗದಿದ್ದರೆ ಮತ್ತೆ 10 ವರ್ಷಗಳ ಬಳಿಕ ಅವಕಾಶ ಸಿಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರ ಇದೇ ಕೊನೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.