ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ: ರೋಗ ರುಜಿನಗಳು ಹೆಚ್ಚಾಗೋ ಸಾಧ್ಯತೆ, ಎಚ್ಚರ

Updated on: Apr 12, 2025 | 4:25 PM

ಬೆಂಗಳೂರು ಕರಗ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಬ್ರಹ್ಮಾಂಡ ಗುರೂಜಿ ಜನರ ಆರೋಗ್ಯ ಸಂಬಂಧ ಭಯಾನಕ ಭವಿಷ್ಯವಾಣಿ ನುಡಿದಿದ್ದಾರೆ. ಅದಕ್ಕೆ ಕಾರಣ ಏನು? ಜನರು ಏನು ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಎಂಬುದನ್ನೂ ಅವರು ವಿವರಿಸಿದ್ದಾರೆ. ಅವರು ನೀಡಿರುವ ಮಾಹಿತಿ, ಪರಿಹಾರ ಮಾರ್ಗೋಪಾಯಗಳ ವಿವರ ವಿಡಿಯೋದಲ್ಲಿ ನೋಡಿ.

ಬೆಂಗಳೂರು, ಏಪ್ರಿಲ್ 12: ಐತಿಹಾಸಿಕ ಬೆಂಗಳೂರು ಕರಗ ನಡೆಯುವ ಧರ್ಮರಾಯಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ ಬ್ರಹ್ಮಾಂಡ ಗುರೂಜಿ ಮುಂಬರುವ ದಿನಗಳ ಬಗ್ಗೆ ಭಯಾನಕ ಭವಿಷ್ಯ ನುಡಿದಿದ್ದಾರೆ. ಗುರು ಗ್ರಹ ಸಂಚಾರ, ರಾಹು ಕೇತುಗಳ ಸ್ಥಾನ ಬದಲಾವಣೆ ಬಗ್ಗೆ ವಿಶ್ಲೇಷಿಸಿದ ಅವರು ಜನರ ಆರೋಗ್ಯ, ರಾಜಕೀಯ ಬದಲಾವಣೆಗಳು ಹಾಗೂ ಗುಟ್ಟಾಗಿ ಅಕ್ರಮ ಸಂಬಂಧ ಇಟ್ಟುಕೊಂಡವರ ಸ್ಥಿತಿ ಏನಾಗಲಿದೆ ಎಂಬುದನ್ನು ವಿವರಿಸಿದ್ದಾರೆ. ವಿಶೇಷವಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಜನರಿಗೆ ಸಲಹೆ ನೀಡಿದ್ದಾರೆ. ಅವರ ವಿಶ್ಲೇಷಣೆಯ ಪೂರ್ಣ ವಿಡಿಯೋ ಇಲ್ಲಿದೆ.

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More