ಮೆದುಳು ತಿನ್ನೋ ಅಮೀಬಾ ವೈರಸ್: ಚಾಮರಾಜನಗರದಲ್ಲಿ ಹೈ ಅಲರ್ಟ್, ಜಾಗೃತಿ ಕಾರ್ಯ

Updated By: Ganapathi Sharma

Updated on: Nov 24, 2025 | 9:03 AM

ಕೇರಳದಲ್ಲಿ ಅಮೀಬಾ ವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ, ಚಾಮರಾಜನಗರ ಜಿಲ್ಲಾ ಆರೋಗ್ಯ ಇಲಾಖೆ ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಿಸಿದೆ. ಗುಂಡ್ಲುಪೇಟೆ ಚೆಕ್​ಪೋಸ್ಟ್​ನಲ್ಲಿ ಶಬರಿಮಲೆ ಯಾತ್ರಾರ್ಥಿಗಳಿಗೆ ರೋಗದ ಕುರಿತು ಜಾಗೃತಿ ಮೂಡಿಸಿ, ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮತ್ತು ಸ್ವಚ್ಛತೆ ಕಾಪಾಡುವ ಮಾರ್ಗಸೂಚಿಗಳನ್ನು ವಿತರಿಸಲಾಗುತ್ತಿದೆ.

ಚಾಮರಾಜನಗರ, ನವೆಂಬರ್ 24: ಕೇರಳದಲ್ಲಿ ಅಮೀಬಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಗಡಿಭಾಗದಲ್ಲಿ, ವಿಶೇಷವಾಗಿ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್​ಪೋಸ್ಟ್​​ನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ ಈ ರೋಗದ ಕುರಿತು ಮಾಹಿತಿ ನೀಡಲಾಗುತ್ತಿದೆ. ಗುಂಡ್ಲುಪೇಟೆ ತಾಲೂಕು ಆರೋಗ್ಯ ಅಧಿಕಾರಿ ಡಾ. ಅಲೀಂ ಪಾಷಾ ಬಿ.ಆರ್. ಅವರ ಪ್ರಕಾರ, ಇದು ನೈಗ್ಲೇರಿಯಾ ಫೌಲೇರಿ ಎಂಬ ಪರಾವಲಂಬಿಯಿಂದ ಬರುವ ಅಪರೂಪದ ಕಾಯಿಲೆಯಾಗಿದೆ ಮತ್ತು ಕರ್ನಾಟಕದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದಾಗ್ಯೂ, ಮುನ್ನೆಚ್ಚರಿಕೆ ಕ್ರಮವಾಗಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಮತ್ತು ಸ್ವಚ್ಛತೆ ಕಾಪಾಡುವ ಕುರಿತು ಕರಪತ್ರಗಳನ್ನು ವಿತರಿಸಲಾಗುತ್ತಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವೈದ್ಯಾಧಿಕಾರಿಗಳ ತಂಡಗಳು ಈ ಜಾಗೃತಿ ಕಾರ್ಯದಲ್ಲಿ ನಿರತವಾಗಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ