ಬ್ರೇಕ್ ಫೇಲ್ ಆಗಿ ರಸ್ತೆಯಲ್ಲಿ ಅಡ್ಡಾದಿಡ್ಡಿ ನುಗ್ಗಿದ ಲಾರಿ: ಸಿಕ್ಕ ಸಿಕ್ಕ ವಾಹನಕ್ಕೆಲ್ಲ ಡಿಕ್ಕಿ
ಲೋಡ್ ತುಂಬಿಕೊಂಡು ಬರುತ್ತಿದ್ದಾಗ ಏಕಾಏಕಿ ಬ್ರೇಕ್ ಫೇಲ್ ಆಗಿ ಲಾರಿಯೊಂದು ಹಲವು ವಾಹನಗಳಿಗೆ ಗುದ್ದಿರುವ ಆತಂಕಕಾರಿ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ನಡೆದಿದೆ. ಘಟನೆಯ ದೃಶ್ಯ ಕಾರೊಂದರ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಾಹನಗಳಲ್ಲಿದ್ದ ಎಲ್ಲರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ದೇವನಹಳ್ಳಿ, ಫೆಬ್ರವರಿ 26: ಬ್ರೇಕ್ ಫೇಲ್ ಆದ ಪರಿಣಾಮ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ನುಗ್ಗಿದ ಲಾರಿಯೊಂದು ಸಿಕ್ಕಿ ಸಿಕ್ಕ ವಾಹನಗಳಿಗೆ ಗುದ್ದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ನಡೆದಿದೆ. ಎದುರು ಬರುತ್ತಿದ್ದ ಕಾರುಗಳು, ದ್ವಿಚಕ್ರ ವಾಹನಗಳು ಸೇರಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಲಾರಿ ನಿಂತಿದ್ದು, ಘಟನೆಯ ದೃಶ್ಯ ಕಾರೊಂದರ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಲಾರಿ ನುಗ್ಗಿದ ರಭಸಕ್ಕೆ ಎರಡು ಕಾರುಗಳು, 3 ಬೈಕ್ಗಳು ಜಖಂ ಆಗಿದ್ದು, ವಾಹನಗಳಲ್ಲಿದ್ದ ಎಲ್ಲರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಏರ್ಪೋರ್ಟ್ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಲೋಡ್ ತುಂಬಿಕೊಂಡು ಬರುತ್ತಿದ್ದಾಗ ಏಕಾಏಕಿ ಲಾರಿಯ ಬ್ರೇಕ್ ಫೇಲ್ ಆಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಬಗ್ಗೆ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Feb 26, 2026 12:19 PM
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!

