ಬ್ರೇಕ್ ಫೇಲ್​ ಆಗಿ ರಸ್ತೆಯಲ್ಲಿ ಅಡ್ಡಾದಿಡ್ಡಿ ನುಗ್ಗಿದ ಲಾರಿ: ಸಿಕ್ಕ ಸಿಕ್ಕ ವಾಹನಕ್ಕೆಲ್ಲ ಡಿಕ್ಕಿ

Edited By:

Updated on: Feb 26, 2026 | 12:19 PM

ಲೋಡ್ ತುಂಬಿಕೊಂಡು ಬರುತ್ತಿದ್ದಾಗ ಏಕಾಏಕಿ ಬ್ರೇಕ್ ಫೇಲ್ ಆಗಿ ಲಾರಿಯೊಂದು ಹಲವು ವಾಹನಗಳಿಗೆ ಗುದ್ದಿರುವ ಆತಂಕಕಾರಿ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ನಡೆದಿದೆ.​ ಘಟನೆಯ ದೃಶ್ಯ ಕಾರೊಂದರ ಡ್ಯಾಶ್​​ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಾಹನಗಳಲ್ಲಿದ್ದ ಎಲ್ಲರೂ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ದೇವನಹಳ್ಳಿ, ಫೆಬ್ರವರಿ 26: ಬ್ರೇಕ್​​ ಫೇಲ್​​ ಆದ ಪರಿಣಾಮ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ನುಗ್ಗಿದ ಲಾರಿಯೊಂದು ಸಿಕ್ಕಿ ಸಿಕ್ಕ ವಾಹನಗಳಿಗೆ ಗುದ್ದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ನಡೆದಿದೆ. ಎದುರು ಬರುತ್ತಿದ್ದ ಕಾರುಗಳು, ದ್ವಿಚಕ್ರ ವಾಹನಗಳು ಸೇರಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಲಾರಿ ನಿಂತಿದ್ದು, ಘಟನೆಯ ದೃಶ್ಯ ಕಾರೊಂದರ ಡ್ಯಾಶ್​​ ಕ್ಯಾಮರಾದಲ್ಲಿ ಸೆರೆಯಾಗಿದೆ. ಲಾರಿ‌ ನುಗ್ಗಿದ ರಭಸಕ್ಕೆ ಎರಡು ಕಾರುಗಳು, 3 ಬೈಕ್​ಗಳು ಜಖಂ ಆಗಿದ್ದು, ವಾಹನಗಳಲ್ಲಿದ್ದ ಎಲ್ಲರೂ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಏರ್​ಪೋರ್ಟ್​ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಲೋಡ್ ತುಂಬಿಕೊಂಡು ಬರುತ್ತಿದ್ದಾಗ ಏಕಾಏಕಿ ಲಾರಿಯ ಬ್ರೇಕ್ ಫೇಲ್​ ಆಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಬಗ್ಗೆ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 26, 2026 12:19 PM
Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More