ಬೆಂಕಿಗೆ ಆಹುತಿಯಾಗುತ್ತಿದ್ದ ಮನೆಯಲ್ಲಿ ಸಿಲುಕಿದ್ದ ಆರು ಮಂದಿಯನ್ನು ರಕ್ಷಿಸಿದ ಕೆಚ್ಚೆದೆಯ ಟ್ರಾಫಿಕ್ ಕಾನ್‌ಸ್ಟೆಬಲ್‌, ವಿಡಿಯೋ ನೋಡಿ

|

Updated on: Dec 22, 2023 | 1:38 PM

ಈ ಮಧ್ಯೆ, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದು ಇನ್ನೂ ದೃಢಪಟ್ಟಿಲ್ಲ. ಬೆಂಕಿ ಅವಘಡದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹೈದರಾಬಾದ್: ಪಂಜಗುಟ್ಟಾ ಟ್ರಾಫಿಕ್ ಠಾಣೆಯ ಟ್ರಾಫಿಕ್ ಕಾನ್‌ಸ್ಟೆಬಲ್‌ಯೊಬ್ಬರು ಸಮಯೋಚಿತವಾಗಿ ಸ್ಪಂದಿಸಿದ್ದು, ಬೆಂಕಿಗೆ ಆಹುತಿಯಾಗಿದ್ದ ಮನೆಯೊಳಗೆ ಸಿಲುಕಿದ್ದ ಒಂದೇ ಕುಟುಂಬದ ಆರು ಮಂದಿಯನ್ನು ರಕ್ಷಿಸಿದ್ದಾರೆ. ವರದಿಗಳ ಪ್ರಕಾರ, ಹೈದರಾಬಾದ್‌ನ ಪಂಜಗುಟ್ಟಾ ಪ್ರದೇಶದ ಅಪಾರ್ಟ್ಮೆಂಟ್ ಸಂಕೀರ್ಣದ ಆರನೇ ಮಹಡಿಯಲ್ಲಿರುವ ಪೆಂಟ್‌ಹೌಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಕಟ್ಟಡದಲ್ಲಿ ತಂಗಿದ್ದ ಜನರು ತಮ್ಮ ಮನೆಗೆ ಬೆಂಕಿ ಬೀಳುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಂಜಗುಟ್ಟ ಸಂಚಾರ ಪೊಲೀಸ್ ಪೇದೆ ಶರಣ್ ಕುಮಾರ್ ಸ್ಥಳಕ್ಕೆ ಧಾವಿಸಿ ಡಂಬೆಲ್ ಬಳಸಿ ಬಾಗಿಲು ಒಡೆದಿದ್ದಾರೆ. ಕಾನ್‌ಸ್ಟೆಬಲ್ ಮನೆಯಿಂದ ಜನರನ್ನು ರಕ್ಷಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮನೆಯೊಳಗೆ ಸಿಲುಕಿಕೊಂಡಿದ್ದ ಆರು ಮಂದಿಯನ್ನು ಸುರಕ್ಷಿತವಾಗಿ ಹೊರಕ್ಕೆ ತರಲಾಗಿದೆ.

Also Read: ಉಚಿತ ಬಸ್ ಪ್ರಯಾಣದ ಎಫೆಕ್ಟ್! ಆ ಪುರುಷ ಪ್ರಯಾಣಿಕ ಕಂಡಕ್ಟರ್ ಕೆನ್ನೆ ಕಚ್ಚಿಬಿಟ್ಟ, ಯಾಕೆ ಗೊತ್ತಾ?

ಈ ಮಧ್ಯೆ, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದು ಇನ್ನೂ ದೃಢಪಟ್ಟಿಲ್ಲ. ಬೆಂಕಿ ಅವಘಡದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಗೆ ಕಾರಣವೇನು ಎಂದು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ