Video: ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ

Updated on: May 16, 2026 | 3:09 PM

ಬ್ರೆಜಿಲ್‌ನ ಗೋಯಾನಿಯಾದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮದ್ಯದಂಗಡಿಯ ಫುಟ್‌ಪಾತ್‌ಗೆ ನುಗ್ಗಿದೆ. ಪರಿಣಾಮ, ಮಗು ಸೇರಿದಂತೆ ಮೂವರು ಪಾದಚಾರಿಗಳು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರಿಂದ ತೀವ್ರ ಥಳಿತಕ್ಕೊಳಗಾದ ಚಾಲಕನ ಸ್ಥಿತಿಯೂ ಗಂಭೀರವಾಗಿದೆ. ಈ ಭೀಕರ ಘಟನೆಯ ಸಿಸಿಟಿವಿ ದೃಶ್ಯ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಬ್ರೆಜಿಲ್‌ನ ಗೋಯಾನಿಯಾದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮದ್ಯದ ಅಂಗಡಿಯ ಮುಂಭಾಗದ ಫುಟ್‌ಪಾತ್‌ಗೆ ನುಗ್ಗಿದ ಪರಿಣಾಮ, ಮಗು ಸೇರಿದಂತೆ ಕನಿಷ್ಠ ಮೂವರು ಭೀಕರವಾಗಿ ಗಾಯಗೊಂಡಿದ್ದಾರೆ. ಬ್ರೂನೋ ಕುನ್ಹಾ ಗೊಂಟಿಜೊ (45) ಎಂಬಾತ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಫುಟ್‌ಪಾತ್ ಮೇಲಿದ್ದ ಮ್ಯಾಥ್ಯೂಸ್ (19), ಪಾಮೆಲ್ಲಾ (20) ಮತ್ತು ಆಕೆಯ ಮಗುವಿಗೆ ಬಲವಾಗಿ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಪಘಾತದಿಂದ ರೊಚ್ಚಿಗೆದ್ದ ಸ್ಥಳೀಯರು ಚಾಲಕನಿಗೆ ಮನಬಂದಂತೆ ಥಳಿಸಿದ್ದು, ಆತನ ಸ್ಥಿತಿಯೂ ಗಂಭೀರವಾಗಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಇದನ್ನೂ ಓದಿ: ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More