Video: ಬ್ರೆಜಿಲ್ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಪ್ರಧಾನಿ ನರೇಂದ್ರ ಮೋದಿ 17 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಬ್ರೆಜಿಲ್‌ನ ರಿಯೊ ಡಿ ಜನೈರೊಗೆ ತಲುಪಿದ್ದಾರೆ. ಅಲ್ಲಿ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬ್ರೆಜಿಲಿಯನ್ ಮ್ಯೂಸಿಕ್ ಗ್ರೂಪ್ ಆಸ್ಟ್ರಾಲ್ ಲೈಟ್ ಹಾಡಿನ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಪ್ರಧಾನಿಯವರ ಎರಡು ಹಂತದ ಬ್ರೆಜಿಲ್ ಭೇಟಿ ಇದಾಗಿದೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಿಯವರು ರಿಯೊದಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ರಾಜಧಾನಿ ಬ್ರೆಸಿಲಿಯಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಬ್ರೆಸಿಲಿಯಾದಲ್ಲಿ, ಪ್ರಧಾನಿ ಮೋದಿ ಅವರು ಅಧ್ಯಕ್ಷ ಲೂಲಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಭಾರತ ಮತ್ತು ಬ್ರೆಜಿಲ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವುದು ಇದರ ಉದ್ದೇಶವಾಗಿದೆ. ಈ ಪಾಲುದಾರಿಕೆಯು ವ್ಯಾಪಾರ, ರಕ್ಷಣೆ, ಇಂಧನ, ಬಾಹ್ಯಾಕಾಶ, ತಂತ್ರಜ್ಞಾನ, ಕೃಷಿ, ಆರೋಗ್ಯ ಮತ್ತು ಜನರಿಂದ ಜನರಿಗೆ ಸಂಬಂಧಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವಿಸ್ತರಣೆಯ ಮೇಲೆ ಕೇಂದ್ರೀಕರಿಸುತ್ತದೆ. ಎರಡೂ ದೇಶಗಳ ನಡುವಿನ ಹೆಚ್ಚುತ್ತಿರುವ ಸಹಕಾರದ ದೃಷ್ಟಿಯಿಂದ ಈ ಸಭೆಯನ್ನು ಮಹತ್ವದ್ದಾಗಿ ಪರಿಗಣಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ

ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ