W,W,W,W,W: 254 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ
Brett Randell World Record: ರಾಂಡೆಲ್ ಅವರು ತಮ್ಮ ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಒಂದು ವಿಕೆಟ್ ಪಡೆದಿದ್ದರು. ಆ ನಂತರ ತಮ್ಮ ಮುಂದಿನ ಓವರ್‌ನ ಮೊದಲ ನಾಲ್ಕು ಎಸೆತಗಳಲ್ಲಿ ಸತತವಾಗಿ 4 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಐದು ಎಸೆತಗಳಲ್ಲಿ ಐದು ವಿಕೆಟ್ ಕಬಳಿಸಿದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.
254 ವರ್ಷಗಳ ಕ್ರಿಕೆಟ್ ಇತಿಹಾಸ ಹೊಂದಿರುವ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ 5 ಎಸೆತಗಳಲ್ಲಿ ಎಂಬುದು ವಿಶೇಷ. ಅಂದರೆ ಇದೇ ಮೊದಲ ಬಾರಿಗೆ ಫಸ್ಟ್ ಕ್ಲಾಸ್ ಕ್ರಿಕೆಟ್ನಲ್ಲಿ ಬೌಲರ್ರೊಬ್ಬರು 5 ಎಸೆತಗಳಲ್ಲಿ ಸತತ 5 ವಿಕೆಟ್ ಕಬಳಿಸಿದ್ದಾರೆ. ಈ ಸಾಧನೆ ಮಾಡಿದ ಬೌಲರ್ ಹೆಸರು ಬ್ರೆಟ್ ರಾಂಡೆಲ್.
ನ್ಯೂಝಿಲೆಂಡ್ನ ಪ್ಲಂಕೆಟ್ ಶೀಲ್ಡ್ ಪ್ರಥಮ ದರ್ಜೆ ಕ್ರಿಕೆಟ್ ಟೂರ್ನಿಯಲ್ಲಿ ನಡೆದ ಪಂದ್ಯದಲ್ಲಿ ಸೆಂಟ್ರಲ್ ಡಿಸ್ಟ್ರಿಕ್ಟ್ಸ್ ಹಾಗೂ ನಾರ್ದನ್ ಡಿಸ್ಟ್ರಿಕ್ಟ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಮ್ಯಾಚ್ನಲ್ಲಿ ಸೆಂಟ್ರಲ್ ಡಿಸ್ಟ್ರಿಕ್ಟ್ಸ್ ಪರ ಕಣಕ್ಕಿಳಿದ ಬ್ರೆಟ್ ರಾಂಡೆಲ್ ಕೇವಲ 5 ಎಸೆತಗಳಲ್ಲಿ 5 ವಿಕೆಟ್ ಪಡೆಯುವ ಮೂಲಕ ಕ್ರಿಕೆಟ್ ಜಗತ್ತನ್ನು ಬೆರಗುಗೊಳಿಸಿದ್ದಾರೆ.
ರಾಂಡೆಲ್ ಅವರು ತಮ್ಮ ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಒಂದು ವಿಕೆಟ್ ಪಡೆದಿದ್ದರು. ಆ ನಂತರ ತಮ್ಮ ಮುಂದಿನ ಓವರ್‌ನ ಮೊದಲ ನಾಲ್ಕು ಎಸೆತಗಳಲ್ಲಿ ಸತತವಾಗಿ 4 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಐದು ಎಸೆತಗಳಲ್ಲಿ ಐದು ವಿಕೆಟ್ ಕಬಳಿಸಿದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಕೇವಲ 25 ರನ್ ನೀಡಿದ ಬ್ರೆಟ್ ರಾಂಡೆಲ್ 7 ವಿಕೆಟ್ ಕಬಳಿಸಿ ಮಿಂಚಿದರು. ಪರಿಣಾಮ ನಾರ್ದನ್ ಡಿಸ್ಟ್ರಿಕ್ಟ್ಸ್ ತಂಡವು ಮೊದಲ ಇನಿಂಗ್ಸ್ನಲ್ಲಿ ಕೇವಲ 82 ರನ್ಗಳಿಗೆ ಆಲೌಟ್ ಆಗಿದೆ.
Published on: Mar 08, 2026 02:04 PM
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

