AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಬೌಲರ್​ಗಳನ್ನ ಹಂಗೆಲ್ಲಾ ಹೊಡಿಬೇಡಪ್ಪಾ...!

ನಮ್ಮ ಬೌಲರ್​ಗಳನ್ನ ಹಂಗೆಲ್ಲಾ ಹೊಡಿಬೇಡಪ್ಪಾ…!

ಝಾಹಿರ್ ಯೂಸುಫ್
|

Updated on: Oct 12, 2025 | 10:34 AM

Share

India vs West Indies, 2nd Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತದ ಪರ ಯಶಸ್ವಿ ಜೈಸ್ವಾಲ್ (175) ಹಾಗೂ ಶುಭ್​ಮನ್ ಗಿಲ್ (129) ಭರ್ಜರಿ ಶತಕ ಸಿಡಿಸಿದ್ದರು. ಈ ಶತಕಗಳ ನೆರವಿನೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ನಷ್ಟಕ್ಕೆ 518 ರನ್ ಕಲೆಹಾಕಿತು.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ದೆಹಲಿಯಲ್ಲಿ ನಡೆಯುತ್ತಿದೆ. ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜರುಗುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದರು. ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 258 ಎಸೆತಗಳಲ್ಲಿ 22 ಫೋರ್​ಗಳೊಂದಿಗೆ 175 ರನ್​ ಬಾರಿಸಿದ್ದರು.

ಈ ಭರ್ಜರಿ ಸೆಂಚುರಿಯ ಬಳಿಕ ಯಶಸ್ವಿ ಜೈಸ್ವಾಲ್ ವೆಸ್ಟ್ ಇಂಡೀಸ್ ಲೆಜೆಂಡ್ ಬ್ರಿಯಾನ್ ಲಾರಾ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಲಾರಾ ಮಾಡಿದ ಮನವಿಯ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.

ಲಾರಾ ಅವರನ್ನು ಕಾಣುತ್ತಿದ್ದಂತೆ ಜೈಸ್ವಾಲ್ ಓಡಿ ಹೋಗಿ ಆಲಂಗಿಸಿದರು. ಈ ವೇಳೆ ನಮ್ಮ ಬೌಲರ್​ಗಳನ್ನು ಅಷ್ಟೊಂದು ಕೆಟ್ಟದಾಗಿ ಹೊಡಿಬೇಡ ಎಂದು ಯಶಸ್ವಿ ಜೈಸ್ವಾಲ್​​ಗೆ ತಮಾಷೆಗೆ ಮನವಿ ಮಾಡಿದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತದ ಪರ ಯಶಸ್ವಿ ಜೈಸ್ವಾಲ್ (175) ಹಾಗೂ ಶುಭ್​ಮನ್ ಗಿಲ್ (129) ಭರ್ಜರಿ ಶತಕ ಸಿಡಿಸಿದ್ದರು. ಈ ಶತಕಗಳ ನೆರವಿನೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ನಷ್ಟಕ್ಕೆ 518 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ವೆಸ್ಟ್ ಇಂಡೀಸ್ 52 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 163 ರನ್ ಕಲೆಹಾಕಿದೆ.