ಕಲ್ಯಾಣ ಮಂಟಪದಿಂದ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದ ನವವಧು
ಪರೀಕ್ಷೆ ಮುಗಿಯುವ ತನಕ ಕಾಲೇಜ್ ಕ್ಯಾಂಪಸ್ನಲ್ಲಿ ಕಾದು ಬಳಿಕ ಪತಿ ಹಾಗೂ ಕುಟುಂಬಸ್ಥರು ಮನೆಗೆ ಕರೆದು ಕೊಂಡು ಹೋಗಿದ್ದಾರೆ. ಪರೀಕ್ಷೆ ಮುಗಿದ ಬಳಿಕ ಅವಿನಾಶ್ ಕುಟುಂಬಸ್ಥರು ಮನೆ ತುಂಬಿಸಿಕೊಂಡಿದ್ದಾರೆ.
ಮಂಡ್ಯ: ಕಲ್ಯಾಣ ಮಂಟಪದಿಂದ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ನವವಧು ಬಂದು ಪರೀಕ್ಷೆ ಬರೆದಿರುವಂತಹ ಘಟನೆ ಜಿಲ್ಲೆಯ ಪಾಂಡವಪುರದ ಚಿನಕುರುಳಿಯಲ್ಲಿ ನಡೆದಿದೆ. ಮಂಟಪದಲ್ಲಿ ತಾಳಿ ಕಟ್ಟಿಸಿಕೊಂಡು ನೇರವಾಗಿ ಪರೀಕ್ಷಾ ಕೆಂದ್ರಕ್ಕೆ ಬಂದು ನವವಿವಾಹಿತೆ ಐಶ್ವರ್ಯ ಪರೀಕ್ಷೆ ಬರೆದಿದ್ದಾಳೆ. ನಿನ್ನೆ ಐಶ್ವರ್ಯ ಹಾಗೂ ಅವಿನಾಶ್ ವಿವಾಹವಾಗಿದೆ. ಪ್ರಥಮ ವರ್ಷದ ಬಿಕಾಂ ವ್ಯಾಸಾಂಗ ಮಾಡುತ್ತಿರುವ ಐಶ್ವರ್ಯ, ತಾಳಿ ಕಟ್ಟಿಸಿಕೊಂಡು ನೇರವಾಗಿ ಚಿನಕುರುಳಿಯ ಎಸ್ಟಿಜಿ ಕಾಲೇಜ್ ಆಗಮಿಸಿ ಡಿಜಿಟಲ್ ಫ್ಲೊಯೆನ್ಸಿ ವಿಷಯದ ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿನಿ ಐಶ್ವರ್ಯ ನಡೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದ್ದು, ಐಶ್ವರ್ಯಗೆ ಪತಿ ಅವಿನಾಶ್ ಕೂಡ ಸಾಥ್ ನೀಡಿದ್ದಾರೆ. ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಪತಿ ಸಹಕಾರ ನೀಡಿದ್ದಾರೆ. ಪರೀಕ್ಷೆ ಮುಗಿಯುವ ತನಕ ಕಾಲೇಜ್ ಕ್ಯಾಂಪಸ್ನಲ್ಲಿ ಕಾದು ಬಳಿಕ ಪತಿ ಹಾಗೂ ಕುಟುಂಬಸ್ಥರು ಮನೆಗೆ ಕರೆದು ಕೊಂಡು ಹೋಗಿದ್ದಾರೆ. ಪರೀಕ್ಷೆ ಮುಗಿದ ಬಳಿಕ ಅವಿನಾಶ್ ಕುಟುಂಬಸ್ಥರು ಮನೆ ತುಂಬಿಸಿಕೊಂಡಿದ್ದಾರೆ.
ಇನ್ನಷ್ಟ ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.