[lazy-load-videos-and-sticky-control id=”8YaTFqCqATM”] ಕಲಬುರಗಿ: ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದೆ. ಭಾರಿ ಮಳೆಯ ಪರಿಣಾಮ ಅನೇಕ ಮನೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದ ಅನೇಕ ಮನೆಗಳು ಮಳೆಯಿಂದಾಗಿ ಜಲಾವೃತಗೊಂಡಿವೆ. ಕಾಗಿಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಮಳಖೇಡ್ ಸೇತುವೆ ಸಂಪೂರ್ಣ ಮುಳುಗಿದೆ. ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆ ಮುಳುಗಿರುವ ತಮ್ಮ ಮನೆಗಳನ್ನು ನೋಡಿ ಕಣ್ಣೀರು ಹಾಕುತ್ತಿದ್ದಾರೆ.
ಕಲಬುರಗಿ: ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದೆ. ಭಾರಿ ಮಳೆಯ ಪರಿಣಾಮ ಅನೇಕ ಮನೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದ ಅನೇಕ ಮನೆಗಳು ಮಳೆಯಿಂದಾಗಿ ಜಲಾವೃತಗೊಂಡಿವೆ. ಕಾಗಿಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಮಳಖೇಡ್ ಸೇತುವೆ ಸಂಪೂರ್ಣ ಮುಳುಗಿದೆ. ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆ ಮುಳುಗಿರುವ ತಮ್ಮ ಮನೆಗಳನ್ನು ನೋಡಿ ಕಣ್ಣೀರು ಹಾಕುತ್ತಿದ್ದಾರೆ.