Video: ಸೇತುವೆ ನಿರ್ಮಾಣ ಕಾಮಗಾರಿ ವೇಳೆ ಕ್ರೇನ್ ಉರುಳಿ ಇಬ್ಬರು ಸಾವು

Updated on: Oct 30, 2025 | 11:34 AM

ಮಧ್ಯಪ್ರದೇಶದ ಧಾರ್​ನಲ್ಲಿ ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರ ಸೇರಿದಂತೆ ಹಲವಾರು ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಎರಡು ಕಾರುಗಳು ಸಹ ನಜ್ಜುಗುಜ್ಜಾಗಿವೆ. ಘಟನಾ ಸ್ಥಳದಲ್ಲಿ ಸಮಗ್ರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ಧಾರ್, ಅಕ್ಟೋಬರ್ 30: ಮಧ್ಯಪ್ರದೇಶದ ಧಾರ್ನಲ್ಲಿ ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರ ಸೇರಿದಂತೆ ಹಲವಾರು ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಎರಡು ಕಾರುಗಳು ಸಹ ನಜ್ಜುಗುಜ್ಜಾಗಿವೆ. ಘಟನಾ ಸ್ಥಳದಲ್ಲಿ ಸಮಗ್ರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕ್ರೇನ್ ಇದ್ದಕ್ಕಿದ್ದಂತೆ ಉರುಳಿ ಹಾದುಹೋಗುತ್ತಿದ್ದ ಪಿಕಪ್ ಟ್ರಕ್ ಮೇಲೆ ಬಿದ್ದಿತು ಎಂದು ಧಾರ್ ಪೊಲೀಸ್ ವರಿಷ್ಠಾಧಿಕಾರಿ ಮಾಯಾಂಕ್ ಅವಸ್ಥಿ ತಿಳಿಸಿದ್ದಾರೆ. ಟ್ರಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕೆಲವರು ಕ್ರೇನ್ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಅವರು ಹೇಳಿದರು. ಮೃತರನ್ನು ಜಬಲ್ಪುರದ ನಿವಾಸಿಗಳಾದ ಕಪಿಲ್ ಸಹಾನಿ (50), ಅಮಿತ್ ಅಗರ್ವಾಲ್ (51) ಎಂದು ಗುರುತಿಸಲಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More