ವರಿಷ್ಠರು ಯದುವೀರ್ಗೆ ಟಿಕೆಟ್ ನೀಡಿದ್ದರೂ ಪ್ರತಾಪ್ ಸಿಂಹಗೆ ರಾಜಕೀಯದಲ್ಲಿ ಉಜ್ವಲ ಭವಿಷ್ಯ ಕಾದಿದೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಹಿಂದಿನ ಒಡೆಯರ್ ಅರಸೊತ್ತಿಗೆಯ ಪ್ರತಿನಿಧಿಯಾಗಿರುವ ಯದುವೀರ್ ಒಬ್ಬ ಸಾಮಾನ್ಯ ವ್ಯಕ್ತಿಯ ಹಾಗೆ ಜನರಿಗಾಗಿ ಕೆಲಸ ಮಾಡುತ್ತಾ ಹಿಂದಿನ ಹತ್ತು ವರ್ಷಗಳ ಕಾಲ ಈ ಭಾಗದ ಕ್ರಿಯಾಶೀಲ ಸಂಸದರಾಗಿ ಪ್ರತಾಪ್ ಸಿಂಹ ಮಾಡಿದ ಅಭಿವೃಧ್ಧಿ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗಲು ಕಂಕಣಬದ್ಧರಾಗಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಮೈಸೂರು: ನಗರದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಸಮಾವೇಶದಲ್ಲಿ ಹುರುಪಿನಿಂದ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಮೈಸೂರು-ಕೊಡಗು (Kodagu-Mysuru Constituency) ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆಯ ಅಂತರದಿಂದ ಗೆಲುವು ಸಾಧಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಹಿಂದಿನ ಒಡೆಯರ್ ಅರಸೊತ್ತಿಗೆಯ ಪ್ರತಿನಿಧಿಯಾಗಿರುವ ಯದುವೀರ್ (Yaduveer Krishna Dutt Wodeyar) ಒಬ್ಬ ಸಾಮಾನ್ಯ ವ್ಯಕ್ತಿಯ ಹಾಗೆ ಜನರಿಗಾಗಿ ಕೆಲಸ ಮಾಡುತ್ತಾ ಹಿಂದಿನ ಹತ್ತು ವರ್ಷಗಳ ಕಾಲ ಈ ಭಾಗದ ಕ್ರಿಯಾಶೀಲ ಸಂಸದರಾಗಿ ಪ್ರತಾಪ್ ಸಿಂಹ ಮಾಡಿದ ಅಭಿವೃಧ್ಧಿ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗಲು ಕಂಕಣಬದ್ಧರಾಗಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಟಿಕೆಟ್ ಸಿಗದಿರಬಹುದು, ಅದರೆ ಯದುವೀರ್ ಅವರಿಗೆ ಟಿಕೆಟ್ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ನಾಯಕರು ಪ್ರತಾಪ್ ಸಿಂಹ ಅವರ ಬಗ್ಗೆ ಬೇರೆ ಏನಾದರೂ ಯೋಚನೆ ಮಾಡಿರುತ್ತಾರೆ, ಪ್ರತಾಪ್ ಸಿಂಹ ಅವರಿಗೆ ರಾಜಕೀಯದಲ್ಲಿ ಉಜ್ವಲ ಭವಿಷ್ಯವಿದೆ ಎಂದು ವಿಜಯೇಂದ್ರ ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದರೂ ಯಾವುದೇ ಕ್ಷೇತ್ರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ ಮತ್ತು ಭೀಕರ ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಇದುವರೆಗೆ ಬಿಡಿಗಾಸು ಪರಿಹಾರವನ್ನೂ ನೀಡಿಲ್ಲ ಎಂದು ವಿಜಯೇಂದ್ರ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬೇಸರದಿಂದ ಇನ್ನೂ ಹೊರಬರಲಾಗದ ಪ್ರತಾಪ್ ಸಿಂಹ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆಯಿಂದ ಅರ್ಧದಲ್ಲೇ ಎದ್ದುಹೋದರು!