Brinda Acharya: ‘ನಾನು ಇರೋದೇ ಹೀಗೆ’; ನಗು ನಗುತ್ತಲೇ ಉತ್ತರಿಸಿದ ಬೃಂದಾ ಆಚಾರ್ಯ

Updated on: Jul 29, 2023 | 8:48 AM

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ಬೃಂದಾ ನಟನೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರಕ್ಕೆ ಸಿಗುತ್ತಿರುವ ರೆಸ್ಪಾನ್ಸ್ ನೋಡಿ ಬೃಂದಾ ಕಳೆದೇ ಹೋಗಿದ್ದಾರೆ.

ನಟಿ ಬೃಂದಾ ಆಚಾರ್ಯ (Brinda Acharya) ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ‘ಪ್ರೇಮಂ ಪೂಜ್ಯಂ’ ಮೂಲಕ ಗಮನ ಸೆಳೆದಿದ್ದ ಅವರು ಈಗ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಅವರ ನಟನೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರಕ್ಕೆ ಸಿಗುತ್ತಿರುವ ರೆಸ್ಪಾನ್ಸ್ ನೋಡಿ ಬೃಂದಾ ಕಳೆದೇ ಹೋಗಿದ್ದಾರೆ. ಅವರ ಖುಷಿ ದ್ವಿಗುಣ ಆಗಿದೆ. ‘ನಾನು ಯಾವಾಗಲೂ ನಗುತ್ತಾನೇ ಇರೋದು. ಈ ನಗು ಮತ್ತಷ್ಟು ಜಾಸ್ತಿ ಆಗಿದೆ’ ಎಂದು ಬೃಂದಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More