ಒಂದೇ ಒಂದು ಪಂದ್ಯ ಗೆಲ್ಲದೇ ಇತಿಹಾಸ ನಿರ್ಮಿಸಿದ ಬ್ರಿಸ್ಬೇನ್ ಹೀಟ್
Brisbane Heat: ಬ್ರಿಸ್ಬೇನ್ ಹೀಟ್ ತಂಡವು ವುಮೆನ್ಸ್ ಬಿಗ್ ಬ್ಯಾಷ್ ಲೀಗ್ ಇತಿಹಾಸದಲ್ಲೇ ಸೀಸನ್ವೊಂದರಲ್ಲಿ ಒಂದೇ ಒಂದು ಪಂದ್ಯ ಗೆಲ್ಲದೇ ಟೂರ್ನಿ ಮುಗಿಸಿದ ಮೊದಲ ತಂಡ ಎನಿಸಿಕೊಂಡಿದೆ. ಬ್ರಿಸ್ಬೇನ್ ಹೀಟ್ ತಂಡವು ಈ ಬಾರಿ ಒಟ್ಟು 10 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಇನ್ನು ಒಂದು ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ವುಮೆನ್ಸ್ ಬಿಗ್ ಬ್ಯಾಷ್ ಲೀಗ್ನಲ್ಲಿ ಬ್ರಿಸ್ಬೇನ್ ಹೀಟ್ ತಂಡದ ಅಭಿಯಾನ ಅಂತ್ಯವಾಗಿದೆ. ಅದು ಕೂಡ ಒಂದೇ ಒಂದು ಪಂದ್ಯ ಗೆಲ್ಲದೇ ಎಂಬುದೇ ಅಚ್ಚರಿ. ಪರ್ತ್ ಮೈದಾನದಲ್ಲಿ ನಡೆದ ಈ ಟೂರ್ನಿಯ 39ನೇ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಪರ್ತ್ ಸ್ಕಾಚರ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಬ್ರಿಸ್ಬೇನ್ ಹೀಟ್ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪರ್ತ್ ಸ್ಕಾರ್ಚರ್ಸ್ ತಂಡವು 19.2 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್ಗಳ ಜಯ ಸಾಧಿಸಿದೆ.
ಈ ಸೋಲಿನೊಂದಿಗೆ ಬ್ರಿಸ್ಬೇನ್ ಹೀಟ್ ತಂಡವು ವುಮೆನ್ಸ್ ಬಿಗ್ ಬ್ಯಾಷ್ ಲೀಗ್ ಇತಿಹಾಸದಲ್ಲೇ ಸೀಸನ್ವೊಂದರಲ್ಲಿ ಒಂದೇ ಒಂದು ಪಂದ್ಯ ಗೆಲ್ಲದೇ ಟೂರ್ನಿ ಮುಗಿಸಿದ ಮೊದಲ ತಂಡ ಎನಿಸಿಕೊಂಡಿದೆ. ಬ್ರಿಸ್ಬೇನ್ ಹೀಟ್ ತಂಡವು ಈ ಬಾರಿ ಒಟ್ಟು 10 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಇನ್ನು ಒಂದು ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.

