ಒಂದೇ ಒಂದು ಪಂದ್ಯ ಗೆಲ್ಲದೇ ಇತಿಹಾಸ ನಿರ್ಮಿಸಿದ ಬ್ರಿಸ್ಬೇನ್ ಹೀಟ್

Updated on: Dec 07, 2025 | 9:56 AM

Brisbane Heat: ಬ್ರಿಸ್ಬೇನ್ ಹೀಟ್ ತಂಡವು ವುಮೆನ್ಸ್ ಬಿಗ್ ಬ್ಯಾಷ್ ಲೀಗ್​ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಒಂದೇ ಒಂದು ಪಂದ್ಯ ಗೆಲ್ಲದೇ ಟೂರ್ನಿ ಮುಗಿಸಿದ ಮೊದಲ ತಂಡ ಎನಿಸಿಕೊಂಡಿದೆ. ಬ್ರಿಸ್ಬೇನ್ ಹೀಟ್ ತಂಡವು ಈ ಬಾರಿ ಒಟ್ಟು 10 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಒಂದು ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ವುಮೆನ್ಸ್ ಬಿಗ್ ಬ್ಯಾಷ್ ಲೀಗ್​ನಲ್ಲಿ ಬ್ರಿಸ್ಬೇನ್ ಹೀಟ್ ತಂಡದ ಅಭಿಯಾನ ಅಂತ್ಯವಾಗಿದೆ. ಅದು ಕೂಡ ಒಂದೇ ಒಂದು ಪಂದ್ಯ ಗೆಲ್ಲದೇ ಎಂಬುದೇ ಅಚ್ಚರಿ. ಪರ್ತ್​ ಮೈದಾನದಲ್ಲಿ ನಡೆದ ಈ ಟೂರ್ನಿಯ 39ನೇ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಪರ್ತ್​ ಸ್ಕಾಚರ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಬ್ರಿಸ್ಬೇನ್ ಹೀಟ್ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪರ್ತ್​ ಸ್ಕಾರ್ಚರ್ಸ್ ತಂಡವು 19.2 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್​ಗಳ ಜಯ ಸಾಧಿಸಿದೆ.

ಈ ಸೋಲಿನೊಂದಿಗೆ ಬ್ರಿಸ್ಬೇನ್ ಹೀಟ್ ತಂಡವು ವುಮೆನ್ಸ್ ಬಿಗ್ ಬ್ಯಾಷ್ ಲೀಗ್​ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಒಂದೇ ಒಂದು ಪಂದ್ಯ ಗೆಲ್ಲದೇ ಟೂರ್ನಿ ಮುಗಿಸಿದ ಮೊದಲ ತಂಡ ಎನಿಸಿಕೊಂಡಿದೆ. ಬ್ರಿಸ್ಬೇನ್ ಹೀಟ್ ತಂಡವು ಈ ಬಾರಿ ಒಟ್ಟು 10 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಒಂದು ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.

 

Published on: Dec 07, 2025 09:53 AM
Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More