AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa Resignation: ರಾಜೀನಾಮೆ ನೀಡಿದ ಬಿ.ಎಸ್. ಯಡಿಯೂರಪ್ಪ, ತಾವು ಪ್ರಮಾಣವಚನ ಸ್ವೀಕರಿಸಿದ ದಿನವೇ ರಾಜೀನಾಮೆ ಸಲ್ಲಿಕೆ

BS Yediyurappa Resignation: ರಾಜೀನಾಮೆ ನೀಡಿದ ಬಿ.ಎಸ್. ಯಡಿಯೂರಪ್ಪ, ತಾವು ಪ್ರಮಾಣವಚನ ಸ್ವೀಕರಿಸಿದ ದಿನವೇ ರಾಜೀನಾಮೆ ಸಲ್ಲಿಕೆ

TV9 Web
| Edited By: |

Updated on:Jul 26, 2021 | 1:00 PM

Share

BS Yediyurappa Resign: ರಾಜೀನಾಮೆ ನೀಡುದಾಗಿ ಘೋಷಿಸುವ ವೇಳೆ ಯಡಿಯೂರಪ್ಪ ಭಾವುಕರಾಗಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸುತ್ತೇನೆ ಎಂದು ತಿಳಿಸಿದ ಅವರು, ದುಃಖದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿಲ್ಲ. ಸಂತೋಷದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವೆ ಎಂದು ಹೇಳಿದ್ದಾರೆ.

ಬೆಂಗಳೂರು: ಇಂದು ನಡೆದ ಸಾಧನಾ ಸಮಾವೇಶದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವೆ. ವಿಧಾನಸೌಧದಿಂದ ನೇರವಾಗಿ ತೆರಳಿ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ರಾಜೀನಾಮೆ ನೀಡುದಾಗಿ ಘೋಷಿಸುವ ವೇಳೆ ಯಡಿಯೂರಪ್ಪ ಭಾವುಕರಾಗಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸುತ್ತೇನೆ ಎಂದು ತಿಳಿಸಿದ ಅವರು, ದುಃಖದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿಲ್ಲ. ಸಂತೋಷದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವೆ ಎಂದು ಹೇಳಿದ್ದಾರೆ.

ಸಂತೋಷದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಭಾವುಕರಾಗಿ ಹೇಳಿದ ಬಿಎಸ್​ವೈ, ಸಿಎಂ ಆಗಿ ಅಧಿಕಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. 75 ವರ್ಷ ದಾಟಿದ ನನಗೆ ಸಿಎಂ ಸ್ಥಾನವನ್ನು ನೀಡಿದ್ದರು. 2 ವರ್ಷ ಆಡಳಿತ ನಡೆಸಲು ಅವಕಾಶವನ್ನು ನೀಡಿದ್ದರು. ಕೇವಲ ಶಬ್ದಗಳಲ್ಲೇ ಅಭಿನಂದನೆ ಸಲ್ಲಿಸುವುದಕ್ಕೆ ಆಗಲ್ಲ ಎಂದು ಅಭಿಪ್ರಾಯಪಟ್ಟರು.

Published on: Jul 26, 2021 12:58 PM