Assembly Polls: ತೀವ್ರ ಕುತೂಹಲ ಕೆರಳಿಸಿದೆ ಇಂದು ಬೆಳಗ್ಗೆ 11 ಗಂಟೆಗೆ ಬಿಎಸ್ ಯಡಿಯೂರಪ್ಪ ಕರೆದಿರುವ ಸುದ್ದಿಗೋಷ್ಟಿ

Assembly Polls: ತೀವ್ರ ಕುತೂಹಲ ಕೆರಳಿಸಿದೆ ಇಂದು ಬೆಳಗ್ಗೆ 11 ಗಂಟೆಗೆ ಬಿಎಸ್ ಯಡಿಯೂರಪ್ಪ ಕರೆದಿರುವ ಸುದ್ದಿಗೋಷ್ಟಿ

ಅರುಣ್​ ಕುಮಾರ್​ ಬೆಳ್ಳಿ
|

Updated on:Mar 30, 2023 | 9:57 AM

ಯಡಿಯೂರಪ್ಪನವರು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾ ಗೋಷ್ಟಿ ಕರೆದಿದ್ದಾರೆ. ಯಾವ ವಿಷಯವನ್ನು ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ ಎಂಬ ಸಂಗತಿಯೇ ಕುತೂಹಲ ಕೆರಳಿಸಿದೆ.

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಅಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಇಂದು ಬೆಳಗ್ಗೆ 11 ಗಂಟೆಗೆ ತುರ್ತು ಸುದ್ದಿಗೋಷ್ಟಿಯೊಂದನ್ನು (press meet) ಕರೆದಿರುವುದು ಕುತೂಹಲ ಮೂಡಿಸಿದೆ. ನಿನ್ನೆಯಷ್ಟೇ ಚುನಾವಣಾ ಅಯೋಗ (Election Commission) ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕಗಳನ್ನು ಪ್ರಕಟಿಸಿದೆ ಮತ್ತು ಚುನಾವಣಾ ನೀತೆ ಸಂಹಿತೆ ಕೂಡ ಜಾರಿಗೆ ಬಂದಿದೆ. ಯಡಿಯೂರಪ್ಪನವರು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾ ಗೋಷ್ಟಿ ಕರೆದಿದ್ದಾರೆ. ಯಾವ ವಿಷಯವನ್ನು ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ ಎಂಬ ಸಂಗತಿಯೇ ಕುತೂಹಲ ಕೆರಳಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 30, 2023 09:57 AM