ಯಾವಾಗ ಏನು ಬೇಕಾದರೂ ಆಗಬಹುದು: ಮಾರ್ಮಿಕ ಹೇಳಿಕೆ ಕೊಟ್ಟ ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕ ಸರಕಾರದ ಅಧಿಕಾರ ಕಿತ್ತಾಟ ಮತ್ತು ಅಭಿವೃದ್ಧಿ ಕೊರತೆಯನ್ನು ಟೀಕಿಸಿದ್ದಾರೆ. ಆರೆಂಟು ತಿಂಗಳಿಂದ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಹೋರಾಟದಿಂದ ಜನ ಬೇಸತ್ತಿದ್ದಾರೆ. ಬರುವ ದಿನಗಳಲ್ಲಿ ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತಾರೆ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು ಎಂದು ಅವರು ಹೇಳಿದ್ದಾರೆ.
ಶಿವಮೊಗ್ಗ, ನವೆಂಬರ್ 27: ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆಂತರಿಕ ಕಿತ್ತಾಟ ಮತ್ತು ಅಭಿವೃದ್ಧಿ ಕಾರ್ಯಗಳ ಕೊರತೆಯ ಬಗ್ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಕಳೆದ ಆರೆಂಟು ತಿಂಗಳಿಂದ ಸರ್ಕಾರವು ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಬಡಿದಾಟದಲ್ಲಿ ನಿರತವಾಗಿದೆ. ಇದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳ ಕಡೆ ಗಮನ ಕೊಡುತ್ತಿಲ್ಲ. ಈ ಕುರಿತು ರಾಜ್ಯದ ಜನತೆ ಬೇಸತ್ತಿದ್ದು, ಛೀಮಾರಿ ಹಾಕುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ರಾಜಕೀಯದಲ್ಲಿ ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು ಎನ್ನುವ ವಾತಾವರಣವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 27, 2025 05:53 PM
