ಪುತ್ರ ಬಿ.ವೈ. ವಿಜಯೇಂದ್ರನಿಗೆ ಬಿಜೆಪಿ ಪಟ್ಟ ಸಿಕ್ಕಿದ ಬಗ್ಗೆ ಬಿಎಸ್ ಯಡಿಯೂರಪ್ಪ ಹೇಳಿದಿಷ್ಟು

ಪುತ್ರ ಬಿ.ವೈ. ವಿಜಯೇಂದ್ರನಿಗೆ ಬಿಜೆಪಿ ಪಟ್ಟ ಸಿಕ್ಕಿದ ಬಗ್ಗೆ ಬಿಎಸ್ ಯಡಿಯೂರಪ್ಪ ಹೇಳಿದಿಷ್ಟು

Malatesh Jaggin
| Updated By: ಆಯೇಷಾ ಬಾನು

Updated on:Nov 11, 2023 | 2:23 PM

ಬೆಂಗಳೂರಿನಲ್ಲಿ ಟಿವಿ9ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಮಾಡ್ತಾರೆಂದು ನಿರೀಕ್ಷೆ ಇರಲಿಲ್ಲ. ಬಿಜೆಪಿ ನಾಯಕರಾದ ಅಮಿತ್ ಶಾ, ನಡ್ಡಾ ಸೇರಿ ನಿರ್ಧಾರ ಕೈಗೊಂಡಿದ್ದಾರೆ. ವಿಜಯೇಂದ್ರ ಸಮರ್ಥವಾಗಿ ಕೆಲಸ ಮಾಡ್ತಾರೆಂಬ ವಿಶ್ವಾಸ ವರಿಷ್ಠರಿಗಿದೆ. ಎಲ್ಲರ ನಿರೀಕ್ಷೆಗೆ ತಕ್ಕಂತೆ ಬಿ.ವೈ.ವಿಜಯೇಂದ್ರ ಕೆಲಸ ಮಾಡುತ್ತಾರೆ ಎಂದರು.

ಬೆಂಗಳೂರು, ನ.11: ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಆಯ್ಕೆಯಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ವಿಜಯೋತ್ಸವೇ ನಡೆಯುತ್ತಿದೆ. ಸದ್ಯ ಈ ಬಗ್ಗೆ ಬೆಂಗಳೂರಿನಲ್ಲಿ ಟಿವಿ9ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಮಾಡ್ತಾರೆಂದು ನಿರೀಕ್ಷೆ ಇರಲಿಲ್ಲ. ಬಿಜೆಪಿ ನಾಯಕರಾದ ಅಮಿತ್ ಶಾ, ನಡ್ಡಾ ಸೇರಿ ನಿರ್ಧಾರ ಕೈಗೊಂಡಿದ್ದಾರೆ. ವಿಜಯೇಂದ್ರ ಸಮರ್ಥವಾಗಿ ಕೆಲಸ ಮಾಡ್ತಾರೆಂಬ ವಿಶ್ವಾಸ ವರಿಷ್ಠರಿಗಿದೆ. ಎಲ್ಲರ ನಿರೀಕ್ಷೆಗೆ ತಕ್ಕಂತೆ ಬಿ.ವೈ.ವಿಜಯೇಂದ್ರ ಕೆಲಸ ಮಾಡುತ್ತಾರೆ ಎಂದರು.

ವೀರಶೈವ ಸಮುದಾಯ ನಮ್ಮ ಜೊತೆ ಇದೆ. ಎಲ್ಲರೂ ಸೇರಿ ಮತ್ತಷ್ಟು ಬಲಪಡಿಸುವ ಕೆಲಸ ಮಾಡಲಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸೀಟ್‌ ಗೆಲ್ಲುತ್ತೇವೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಇದೇ ವೇಳೆ ನಿಮ್ಮನ್ನು ಹಾಗೂ ಲಿಂಗಾಯತ ಸಮುದಾಯವನ್ನು ಕಡೆಗಣಿಸಲಾಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್​ವೈ, ಇಂತಹ ಪ್ರಶ್ನೆನೇ ಇಲ್ಲ. ಎಲ್ಲಾ ಸಮಯದಲ್ಲೂ ನಮಗೆ ಬೆಂಬಲ ನೀಡಿದ್ದಾರೆ. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಂಬಲ ಸಿಗುತ್ತೆ ಎಂದರು. ಲೋಕಸಭೆಗೆ ರಾಜ್ಯದುದ್ದಗಲಕ್ಕೂ ಪ್ರವಾಸ ಮಾಡ್ತೇವೆ. ಹೆಚ್ಚು ಸೀಟುಗಳನ್ನು ಗೆಲ್ಲಬೇಕು, ಮೋದಿಯವರಿಗೆ ಉಡುಗೊರೆ ಕೊಡಬೇಕು ಎಂಬುವುದು ನಮ್ಮ ಅಪೇಕ್ಷೆ. ಮೋದಿಯವರನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಅವರ ಹೆಸರಿನಲ್ಲಿ ನಾವು ಗೆಲುವು ಸಾಧಿಸಿಬೇಕು. ಅವರು ಮತ್ತೆ ದೇಶದ ಪ್ರಧಾನಿ ಆಗಬೇಕು ಎಂದರು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Nov 11, 2023 02:22 PM